Advertisement
ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಈ ಹಿಂದೆ ಸಮನ್ಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಜಮೀರ್ ವಿಚಾರಣೆ ಎದುರಿಸಿದ್ದು, ಆಸ್ತಿಯ ಮೂಲದ ಕುರಿತು ಲಿಖಿತ ರೂಪದಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ವಿಚಾರಣೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಮೀರ್, ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ನಾನು ಮಾತ್ರ ಅವರ ಕಣ್ಣಿಗೆ ಕಾಣಿಸುತ್ತಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಮನ್ಸ್ ಮೂಲಕ ಕೇಳಿದ ಕೆಲ ದಾಖಲೆಗಳನ್ನು ಎಸಿಬಿ ಅಧಿಕಾರಿಗಳಿಗೆ ಒದಗಿಸಿದ್ದೇನೆ. ಇ.ಡಿ. ಅಧಿಕಾರಿಗಳು ಈ ಹಿಂದೆ ಮನೆ ಖರೀದಿ ಹಾಗೂ ಇನ್ನಿತರ ವ್ಯವಹಾರಗಳ ಬಗ್ಗೆ ದಾಖಲೆ ಕೇಳಿದ್ದರು. ಅವರಿಗೆ ಕೊಟ್ಟಿರುವ ದಾಖಲೆಗಳನ್ನೇ ಎಸಿಬಿಗೂ ಕೊಟ್ಟಿದ್ದೇನೆ ಎಂದು ಹೇಳಿದರು.