Advertisement

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

03:09 PM Jul 13, 2024 | |

ಗದಗ: ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ. ಅಕ್ರಮ ವರ್ಗಾವಣೆಯಾಗಿದೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಾಗಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಸಿಬ್ಬಂದಿಗೆ ಇಂತಹ ಅಕೌಂಟ್ ಗಳನ್ನು ಬಂದ್ ಮಾಡಲು ಸೂಚನೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸಂಗ್ರಹಿಸಲು ಮಾಹಿತಿ ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಗರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ. ಕಠಿಣ ಕ್ರಮ ನೀಡಲಾಗುವುದು. ಸರ್ಕಾರದ ಹಣವನ್ನು ಯಾರು ದುರ್ಬಳಕೆ ಮಾಡಿದ್ದಾರೋ ಅವರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದರು.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ ಮತ್ತು ಮಂಡಳಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಣಕಾಸು ಅಶಿಸ್ತಿನ ವರದಿಗಳ ಹಿನ್ನೆಲೆಯಲ್ಲಿ ನಮ್ಮ ಇಲಾಖೆಯ ನಿಗಮಗಳಾದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ ಮತ್ತು ಇಲಾಖೆಗಳಾದ ಪ್ರವಾಸೋದ್ಯಮ ನಿರ್ದೇಶನಾಲಯ, ಪುರಾತತ್ವ ಮತ್ತು ಸಂಗ್ರಹಾಲಯಗಳ ಇಲಾಖೆ ಹಾಗೂ ಇತರೆ ಅಂಗ-ಸಂಸ್ಥೆಗಳಲ್ಲಿ ಹಣಕಾಸು ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಲವಾರು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ನಿಗಮ/ಮಂಡಳಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಹಲವಾರು ಮಾಹಿತಿಗಳು ಸ್ವೀಕೃತವಾಗಿವೆ. 22ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಲ್ಲಿ ವ್ಯವಹರಿಸಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇಲಾಖೆಗೆ ಸಂಬಂಧಪಟ್ಟ ಕೆಲವು ಖಾತೆಗಳನ್ನು ಬಹುವರ್ಷಗಳಿಂದ ವ್ಯವಹರಿಸದೆ ಹಾಗೆಯೇ ಬಿಡಲಾಗಿದೆ ಎಂದು ತಿಳಿದಿದೆ. ಕೆಲವು ಕಡೆಗಳಲ್ಲಿ ಅತ್ಯಂತ ಪ್ರಮುಖ ಹಣಕಾಸಿನ ವರ್ಗಾವಣೆ ಮತ್ತು ವ್ಯವಹರಣೆಗಳನ್ನು ಯಾವುದೇ ಜವಾಬ್ದಾರಿಯಿಲ್ಲದ ಹೊರಗುತ್ತಿಗೆ ಸಿಬ್ಬಂದಿ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿಯಿದೆ ಎಂದರು.

ಹಣಕಾಸು ಇಲಾಖೆಯ ಮಾರ್ಗಸೂಚಿ ಸೂತ್ರಗಳನ್ನು ಉಲ್ಲಂಘಿಸಿ ಮಾರ್ಗಪಲ್ಲಟ ಮುಖ್ಯವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಾಡಿರಬಹುದಾದ ಸರ್ಕಾರದ ಹಣವನ್ನು, ಈ ರೀತಿ ಬೇರೆ ಬೇರೆ ಖಾತೆಗಳಲ್ಲಿರುವ ಹಣವನ್ನು ಮುಖ್ಯ ವಾಹಿನಿಗೆ 48 ಗಂಟೆಗಳಲ್ಲಿ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿವರವಾದ ವರದಿಯನ್ನು ಮುಂದಿನ 72 ಗಂಟೆಗಳಲ್ಲಿ ಇಲಾಖಾ ಕಾರ್ಯದರ್ಶಿಯವಲ್ಲಿ ಒದಗಿಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ಮತ್ತು ನಿಗಮ/ಮಂಡಳಿಗಳು ಕೆಲ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುವುದು ಅಗತ್ಯವಾಗಿದೆ ಎಂದು ಎಚ್.ಕೆ. ಪಾಟೀಲ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next