Advertisement

ಜೈಪುರದಲ್ಲಿ ಅಕ್ರಮ ಜೂಜಾಟ: ಮಹಿಳೆಯರು ಸೇರಿ 84 ಮಂದಿ ಬಂಧನ

07:38 PM Aug 21, 2022 | Team Udayavani |

ಜೈಪುರ: ಇಲ್ಲಿನ ಜೈಸಿಂಗ್‌ಪುರ ಖೋರ್‌ ಪ್ರದೇಶದ ರೆಸಾರ್ಟ್‌ ಮೇಲೆ ಪೊಲೀಸರು ದಾಳಿ ನಡೆಸಿದ ಬಳಿಕ ಅಕ್ರಮ ಜೂಜಾಟದಲ್ಲಿ ತೊಡಗಿದ್ದ 13 ಮಹಿಳೆಯರು ಸೇರಿದಂತೆ 84 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

Advertisement

ಬಂಧಿತರಲ್ಲಿ ಕರ್ನಾಟಕ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಬೆಂಗಳೂರಿನಲ್ಲಿ ತಹಶೀಲ್ದಾರ್ ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದ್ದು, ಅವರ ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಜೈಪುರ ಪೊಲೀಸರ ತಂಡ ಶನಿವಾರ ರಾತ್ರಿ ಆರೋಪಿಗಳು ಜೂಜಾಡುತ್ತಿದ್ದ ಸಾಯಿಪುರ ಬಾಗ್ ರೆಸಾರ್ಟ್‌ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. 9 ಹುಕ್ಕಾ, ಐಎಂಎಫ್‌ಎಲ್‌ನ 44 ಬಾಟಲಿಗಳು, 66 ಬಿಯರ್ ಬಾಟಲಿಗಳು, 14 ಐಷಾರಾಮಿ ಕಾರುಗಳು, ಒಂದು ಟ್ರಕ್ ಮತ್ತು 23.78 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜೈಪುರ ಪೊಲೀಸ್ ಹೆಚ್ಚುವರಿ ಆಯುಕ್ತ ಅಜಯ್‌ಪಾಲ್ ಲಂಬಾ ತಿಳಿಸಿದ್ದಾರೆ.

ಆರೋಪಿಗಳು ಹರಿಯಾಣ, ಪಂಜಾಬ್, ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳವರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next