Advertisement

ನಾನು ಸೂಪರ್‌ ಸಿಎಂ ಅಲ್ಲ:ಎಚ್‌.ಡಿ.ರೇವಣ್ಣ

06:25 AM Jun 18, 2018 | Team Udayavani |

ಹುಬ್ಬಳ್ಳಿ: “ನಾನು ಸೂಪರ್‌ ಸಿಎಂ ಅಲ್ಲವೇ ಅಲ್ಲ, ಆದರೆ ಈ ನಿಟ್ಟಿನಲ್ಲಿ ನನಗೆ ಪುಕ್ಕಟೆ ಪ್ರಚಾರ ಸಿಗ್ತಿದೆ. ನಾನು ಕೇವಲ ಲೋಕೋಪಯೋಗಿ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನಷ್ಟೆ’ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ. ಆರ್‌ಡಿಪಿಆರ್‌ ಇಲಾಖೆಗೆ ಅಧಿಕಾರಿಗಳನ್ನು ನಾನು ಕೊಟ್ಟಿದ್ದೀನಿ. ಪೋಸ್ಟಿಂಗ್‌ ಮಾಡಿಕೊಳ್ಳುವುದು ಅವರಿಗೆ ಬಿಟ್ಟ ವಿಷಯ. ಜಲಸಂಪನ್ಮೂಲ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಕಾಂಗ್ರೆಸ್‌ ಅಧ್ಯಕ್ಷರಿಗೆ ಬಹಿರಂಗವಾಗಿ ಹೇಳಿದ್ದೇನೆ ಎಂದರು.

ಕಾಂಗ್ರೆಸ್‌ ನಾಯಕರಾದ  ವೇಣುಗೋಪಾಲ, ಡಾ| ಜಿ.ಪರಮೇಶ್ವರ್‌, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ನಾನು ಹಸ್ತಕ್ಷೇಪ ಮಾಡುತ್ತಿದ್ದೇನೆಂದು ತಿಳಿಸಿದರೆ ಅದಕ್ಕೆ ಉತ್ತರ ಕೊಡುತ್ತೇನೆ. ಸಮನ್ವಯ ಸಮಿತಿ ಅದನ್ನೆಲ್ಲ ನೋಡಿಕೊಳ್ಳುತ್ತದೆ ಎಂದರು. ಪೂರ್ಣ ಬಜೆಟ್‌ ಇಲ್ಲವೆ ಪೂರಕ ಬಜೆಟ್‌ ಮಂಡಿಸಬೇಕೋ ಇಲ್ಲವೋ ಎಂಬುದು ಸಿಎಂ ವಿವೇಚನೆಗೆ ಬಿಟ್ಟ ವಿಷಯ. ಅವರು ಸಲಹೆ ಕೇಳಿದ್ರೆ ಮಾತ್ರ ಹೇಳ್ತೀನಿ ಎಂದರು.

ಹೊರಟ್ಟಿಗೆ ಸಚಿವ ಸ್ಥಾನಕ್ಕೆ ಮನವಿ ಮಾಡುವೆ: ಬಸವರಾಜ ಹೊರಟ್ಟಿಯವರು ನಮ್ಮ ನಾಯಕರು. ಉನ್ನತ ಶಿಕ್ಷಣ ಇಲಾಖೆಗೆ ಅವರ ಕೊಡುಗೆ ದೊಡ್ಡದು. ಅವರಿಗೆ ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವಿದೆ. ಅವರಿಗೆ ಸಚಿವ ಸ್ಥಾನ ಕೊಡುವಂತೆ ಎಚ್‌.ಡಿ. ದೇವೇಗೌಡರ,  ಕುಮಾರಸ್ವಾಮಿ ಅವರ ಗಮನಕ್ಕೆ ತರುತ್ತೇನೆ ಎಂದು ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು. ಹೊರಟ್ಟಿ ಹಾಗೂ ಎನ್‌.ಎಚ್‌. ಕೋನರಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕಾರ್ಯವನ್ನು ಪಕ್ಷದ ನಾಯಕರು ಮಾಡುತ್ತಾರೆ. ವಿಶ್ರಾಂತ ಕುಲಪತಿ ರಂಗಪ್ಪರನ್ನು ಶಿಕ್ಷಣ ಇಲಾಖೆ ಸಲಹೆಗಾರರನ್ನಾಗಿ ನೇಮಿಸುವ ಹಾಗೂ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿÇÉಾಧಿಕಾರಿ ಮಾಡುವ ವಿಚಾರ ಸಿಎಂಗೆ ಬಿಟ್ಟಿದ್ದು ಎಂದರು.

ವಿನಯ್‌ ಮನೆಗೆ ರೇವಣ್ಣ ಭೇಟಿ: ಸಚಿವ ಎಚ್‌.ಡಿ. ರೇವಣ್ಣ ಅವರು ಮಾಜಿ ಸಚಿವ ವಿನಯ್‌ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿ, ವಿನಯ್‌ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ, ಉಪಾಹಾರ ಸೇವಿಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ನ ಪ್ರಮುಖ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ನೀಡಿಲ್ಲ ಎಂಬ ಅಸಮಾಧಾನಗಳ ಮಧ್ಯೆಯೇ, ಹೋರಾಟದ ರೂವಾರಿ, ವಿನಯ್‌ ಕುಲಕರ್ಣಿ ನಿವಾಸಕ್ಕೆ ಸಚಿವ ರೇವಣ್ಣ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Advertisement

ಡಿ.ಕೆ. ಶಿವಕುಮಾರ್‌ ಮತ್ತು ನಾನು ಚೆನ್ನಾಗಿದ್ದೀವಿ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ. ಸಮ್ಮಿಶ್ರ ಸರಕಾರ ಐದು ವರ್ಷ ಆಡಳಿತ ನಡೆಸುತ್ತದೆ. ಈ ಕುರಿತು ಯಾರೂ ಧೃತಿಗೆಡಬೇಕಿಲ್ಲ.
– ಎಚ್‌.ಡಿ.ರೇವಣ್ಣ, ಲೋಕೋಪಯೋಗಿ ಸಚಿವ
 

Advertisement

Udayavani is now on Telegram. Click here to join our channel and stay updated with the latest news.

Next