Advertisement

I’m Not Safe In Raj Bhavan… ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಂಗಾಳದ ರಾಜ್ಯಪಾಲರು

12:29 PM Jun 20, 2024 | Team Udayavani |

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಗುರುವಾರ ತಮ್ಮ ವೈಯಕ್ತಿಕ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ಪ್ರಸ್ತುತ ಕೋಲ್ಕತ್ತಾ ಪೊಲೀಸ್ ತುಕಡಿಯು ರಾಜಭವನದಲ್ಲಿ ಬೀಡುಬಿಟ್ಟಿರುವುದು ನನ್ನ ಸುರಕ್ಷತೆಗೆ ಅಪಾಯವನ್ನುಂಟುಮಾಡುವಂತಿದೆ ಎಂದು ಹೇಳಿದ್ದಾರೆ.

Advertisement

ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಳಿ ಹೇಳಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.

ರಾಜಭವನದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ನಿರಂತರವಾಗಿ ತಮ್ಮ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಆರೋಪಿಸಿ ಬೋಸ್ ಅವರು ರಾಜ್ಯ ಸರ್ಕಾರಕ್ಕೆ ದೂರು ನೀಡಿದ್ದಾರೆ. ಬಾಹ್ಯ “ಪ್ರಭಾವಿಗಳ” ಆಜ್ಞೆಯ ಮೇರೆಗೆ ಈ ಕಣ್ಗಾವಲು ನಡೆಸಲಾಗುತ್ತಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ರಾಜಭವನದಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಕೂಡಲೇ ಸ್ಥಳದಿಂದ ತೆರವು ಮಾಡುವಂತೆ ಆದೇಶಿಸಿದ್ದರು ಆದರೆ ಇದುವರೆಗೂ ಸಿಬ್ಬಂದಿಗಳು ನಿರ್ಗಮಿಸಿಲ್ಲ ಅಲ್ಲದೆ ಮುಖ್ಯಮಂತ್ರಿಗಳಿಗಳಿಗೂ ಈ ವಿಚಾರದ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಬೇಸರಹೊರಹಾಕಿದ್ದಾರೆ.

ಇದನ್ನೂ ಓದಿ: Spiderman: Mom not at home; ರೊಟ್ಟಿ ತಯಾರಿಸುತ್ತಿರುವ ಸ್ಪೈಡರ್ ಮ್ಯಾನ್; ವಿಡಿಯೋ ವೈರಲ್

Advertisement

Udayavani is now on Telegram. Click here to join our channel and stay updated with the latest news.

Next