Advertisement
ಪಟ್ಟಣದ ವಿಶ್ಪಕರ್ಮರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಸ್ಕಾಂನವರು ರೈತರು, ಬಡವರು 200, 300 ರೂ. ಮನೆಯ ವಿದ್ಯುತ್ ಬಿಲ್ ಕಟ್ಟದಿದ್ದರೆ ತಕ್ಷಣ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸುತ್ತಾರೆ. ಆದರೆ, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ 22 ಲಕ್ಷ ರೂ. ಬಾಕಿ ಇಟ್ಟುಕೊಂಡು, ವಿದ್ಯುತ್ ದುರುಪಯೋಗಪಡಿಸಿ ಕೊಂಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
Related Articles
Advertisement
ರಾಜಕೀಯ ನಿವೃತ್ತಿ ಪಡೆಯಲಿ: ಇಂದಿನ ರಾಜಕೀಯದಲ್ಲಿ ಪೈಪೋಟಿ ಹೆಚ್ಚಾಗಿದೆ. ಕ್ಷೇತ್ರದಲ್ಲಿ ಮತದಾರರು ಅಮಾಯಕರಲ್ಲ. ಸಮಾಜದ ಅಭಿವೃದ್ಧಿಗಾಗಿ ಯಾವ ಪಕ್ಷ ಹಾಗೂ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಅರಿವು ಮತದಾರರಿಗೆ ಇದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ವೇಗ ನೋಡಿರುವ ಜನರು, ಬಿಜೆಪಿ ಅಭ್ಯರ್ಥಿಯಾಗಿದ್ದ ನನ್ನನ್ನು ಗೆಲ್ಲಿಸಿದ್ದಾರೆ. ಅದನ್ನು ಅರಿತು ರಾಜಕೀಯ ನಿವೃತ್ತಿ ಪಡೆದು, ಮುನಿಯಪ್ಪ ಸಮಾಜಕ್ಕೆ ಮಾರ್ಗದರ್ಶಕರಾಗಲಿ ಎಂದು ಹೇಳಿದರು.
ಜಿಲ್ಲೆಯು ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಲಭ್ಯ ಇನ್ನೂ ಮರೀಚಿಕೆಯಾಗಿದೆ. ಎಲ್ಲಾ ಜನರ ಕಷ್ಟಸುಖಗಳಿಗೆ ಜನಪ್ರತಿನಿಧಿಗಳು ನೆರವಾಗಬೇಕಾಗಿದೆ. ಅದೇರೀತಿ ಕಾರ್ಪೋರೆಟರ್ ಆಗಿ, ಗ್ರಾಪಂ ಸದಸ್ಯನಾಗಿಯೂ ಕೆಲಸ ಮಾಡಲು ಸಿದ್ಧನಿದ್ದೇನೆ ಹೊರತು, ಯಾರೇ ಟೀಕೆ ಮಾಡಿದರೂ ಕೇರ್ ಮಾಡುವುದಿಲ್ಲ ಎಂದು ಸವಾಲ್ ಹಾಕಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಸುದೇವ್‌ಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಎ.ಹನುಮಪ್ಪ, ನಗರ ಅಧ್ಯಕ್ಷ ಆರ್.ಶಶಿಕುಮಾರ್, ಜಿಲ್ಲಾ ಹಿಂದುಳಿದ ಮೋರ್ಚಾಧ್ಯಕ್ಷ ಬಿ.ಹೊಸರಾಯಪ್ಪ, ಜಿಪಂ ಸದಸ್ಯ ಬಿ.ವಿ.ಮಹೇಶ್, ಎಂ.ಪಿ.ಶ್ರೀನಿವಾಸಗೌಡ ಇತರರಿದ್ದರು.