Advertisement
ಮಂಗಳವಾರ ಇಂಫಾಲ್ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್ ನನ್ನ ಆಡಳಿತ ಅವಧಿಯಲ್ಲಿ ಜನಾಂಗೀಯ ಹಿಂಸಾಚಾರಗಳು ನಡೆದು ಹಲವು ಜೀವಗಳನ್ನು ಕಳೆದುಕೊಂಡಿದ್ದೇವೆ, ಈ ಇಡೀ ವರ್ಷ ಅತ್ಯಂತ ದುರದೃಷ್ಟಕರವಾಗಿದೆ. ಕಳೆದ ಮೇ 3 ರಿಂದ ಹಿಡಿದು ಇಂದಿನವರೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಘಟನೆಯಲ್ಲಿ ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕ ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಆದರೆ ಕಳೆದ ಎರಡು ಮೂರೂ ತಿಂಗಳಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಳ್ಳುತ್ತಿದೆ ಜನರು ಹಿಂದಿನ ತಪ್ಪುಗಳನ್ನು ಮರೆತು ಹೊಸ ಜೀವನ ಆರಂಭಿಸುವ ನಾವೆಲ್ಲರೂ ಒಗ್ಗಟ್ಟಾಗಿ ಬಾಳುವ ಹಳೆಯ ಕಹಿಯನ್ನು ಮರೆತು ಹೊಸ ಜೀವನ ನಡೆಸುವ ಎಂದು ಸಮುದಾಯದ ಜನರಲ್ಲಿ ಮನವಿ ಮಾಡಿದರು.
Advertisement
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
04:05 PM Dec 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.