Advertisement

ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರ ವಾಪಸ್, ಒಪಿಡಿ ಸೇವೆ ಆರಂಭ; IMA

02:44 PM Jan 02, 2018 | Team Udayavani |

ನವದೆಹಲಿ: ಎನ್ ಎಂಸಿ(ರಾಷ್ಟ್ರೀಯ ವೈದ್ಯಕೀಯ ಆಯೋಗ) ವಿಧೇಯಕ ವಿರೋಧಿಸಿ ಮಂಗಳವಾರ ದೇಶಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆದಿದೆ.

Advertisement

ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ವಿರೋಧಿಸಿ ಮಂಗಳವಾರ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಬಂದ್ ಮಾಡಿ ಭಾರತೀಯ ವೈದ್ಯಕೀಯ ಮಂಡಳಿ ಮುಷ್ಕರ ನಡೆಸುತ್ತಿತ್ತು.

ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಎನ್ ಎಂಸಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕವನ್ನು ಸಂಸದೀಯ ಸ್ಥಾಯಿ ಸಮಿತಿಗೆ ನೀಡಲು ನಿರ್ಧರಿಸಿದ್ದರಿಂದ ಭಾರತೀಯ ವೈದ್ಯಕೀಯ ಮಂಡಳಿ(ಎಂಸಿಐ) ಮುಷ್ಕರ ವಾಪಸ್ ಪಡೆದಿರುವುದಾಗಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next