Advertisement

ಐಎಂಎ ಪ್ರಕರಣ: ಮಧ್ಯಂತರ ಚಾರ್ಜ್‌ಶೀಟ್‌ ಸಲ್ಲಿಕೆ

01:09 AM Sep 08, 2019 | Lakshmi GovindaRaju |

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು ಶನಿವಾರ ನ್ಯಾಯಲಯಕ್ಕೆ ಮಧ್ಯಂತರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಎಫ್ಐಆರ್‌ ದಾಖಲಿಸಿಕೊಂಡಿದ್ದ ಸಿಬಿಐ ಅಧಿಕಾರಿಗಳು, ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದರು. ಅನಂತರ ತಮ್ಮ ಪ್ರಾಥಮಿಕ ತನಿಖೆಯನ್ನಾಧರಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪುಟುಗಳ ಮಧ್ಯಂತರ ಜಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

Advertisement

ಜೂ.8ರಂದು ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಆಧಾರದ ಮೇಲೆ ತನಿಖೆ ನಡೆಸಿದ್ದ ಎಸ್‌ಐಟಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌, ಐಎಎಸ್‌ ಅಧಿಕಾರಿ ಬಿ.ಎಂ.ವಿಜಯಶಂಕರ್‌, ಉಪವಿಭಾಗಾಧಿಕಾರಿ ಎಲ್‌.ಸಿ.ನಾಗರಾಜು, ಬಿಬಿಎಂಪಿಯ ನಾಮನಿರ್ದೇಶಿತ ಸದಸ್ಯ, ನಾಟಿ ವೈದ್ಯ, ಧರ್ಮಗುರುಗಳು ಸೇರಿ 30ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ, ಹತ್ತಾರು ಕೋಟಿ ರೂ. ಮೌಲ್ಯದ ಚಿರಾಸ್ತಿ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿತ್ತು. ಆರೋಪಿ ಕೂಡ ವಿಚಾರಣೆ ವೇಳೆ ವಂಚನೆ ಬಗ್ಗೆ ತಪ್ಪೋಪ್ಪಿಕೊಂಡಿದ್ದು, ಬರೋಬರಿ 1450 ಕೋಟಿ ರೂ. ವಂಚನೆ ನಡೆದಿರುವುದು ಬೆಳಕಿಗೆ ಬಂದಿತ್ತು.

ಈ ಸಂಬಂಧ ಸರ್ಕಾರದ ಸೂಚನೆ ಮೇರೆಗೆ ಸೆ.3ರಂದು ಎಫ್ಐಆರ್‌ ದಾಖಲು ಮಾಡಿಕೊಂಡಿದ್ದ ಸಿಬಿಐ, ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌, ಐಎಎಸ್‌ ಅಧಿಕಾರಿ ಬಿ.ಎಂ.ವಿಜಯಶಂಕರ್‌, ಉಪವಿಭಾಗಾಧಿಕಾರಿ ಎಲ್‌.ಸಿ.ನಾಗರಾಜು ಸೇರಿ 31 ಮಂದಿಯ ವಿರುದ್ಧ ಸಿಬಿಐ ಎಫ್ಐಆರ್‌ ದಾಖಲು ಮಾಡಿಕೊಂಡಿತ್ತು. ಆದರೆ, ಜೂನ್‌ 8ರಂದು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್‌ ಆಧರಿಸಿ 90 ದಿನಗಳ ಒಳಗಾಗಿ ದೋಷಾರೋಪಟ್ಟಿ ಸಲ್ಲಿಸಬೇಕಿರುವುದರಿಂದ ಶನಿವಾರ ಮಧ್ಯಂತರ ಚಾರ್ಜ್‌ಶೀಟ್‌ ಸಲ್ಲಿಸಿ, ತನಿಖೆ ಮುಂದುವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next