ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೊಹಮದ್ ಮನ್ಸೂರ್ ಖಾನ್ ನನ್ನು ಜುಲೈ 23ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ಶನಿವಾರ ಇಲ್ಲಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಮನ್ಸೂರ್ ಖಾನ್ ನನ್ನು ಅಧಿಕಾರಿಗಳು ಕರೆತಂದಿದ್ದು, ಬಳಿಕ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿದ್ದರು.
ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮನವಿ ಮೇರೆಗೆ ಮನ್ಸೂರ್ ಖಾನ್ ನನ್ನು ಮೂರು ದಿನಗಳ ಕಾಲ ಇ.ಡಿ.ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.
ಗುರುವಾರ ತಡರಾತ್ರಿ ದುಬೈನಿಂದ ವಿಮಾನ ಮೂಲಕ ಮನ್ಸೂರ್ ಖಾನ್ ದೆಹಲಿಗೆ ಆಗಮಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಆಧರಿಸಿ ಎಸ್ ಐಟಿ ಮತ್ತು ಇ.ಡಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿದಯೇ ಬಂಧಿಸಿದ್ದರು.
ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಎಸ್ ಐಟಿ ಮತ್ತು ಇ.ಡಿ ಪ್ರತ್ಯೇಕವಾಗಿ ನಡೆಸುತ್ತಿದ್ದು, ಎರಡೂ ತನಿಖಾ ತಂಡಗಳು ಮನ್ಸೂರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಿದ್ದವು.