Advertisement

18 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ ನೀಡುವಂತೆ ಮೋದಿಗೆ ‘ಐಎಂಎ’ ಪತ್ರ   

02:01 PM Apr 06, 2021 | Team Udayavani |

ನವದೆಹಲಿ : ಕೋವಿಡ್ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು ಅನುಮತಿ ನೀಡುವಂತೆ ಪ್ರಧಾನ ಮಂತ್ರಿ ಮೋದಿಗೆ ಭಾರತೀಯ ವೈದ್ಯಕೀಯ ಸಂಘಟನೆ ಮನವಿ ಮಾಡಿದೆ.

Advertisement

ದೇಶಾದ್ಯಂತ ಕೋವಿಡ್-19 ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, 18 ದಾಟಿದ ವಯೋಮಾನದವರಿಗೂ ಲಸಿಕೆ ತೆಗೆದುಕೊಳ್ಳುವುದಕ್ಕೆ ಅನುಮತಿ ನೀಡಬೇಕೆಂದು ಐಎಂಎ ಪತ್ರದ ಮೂಲಕ ಮನವಿ ಮಾಡಿದೆ.

ಈಗಾಗಲೇ ದೇಶದಲ್ಲಿ ಲಸಿಕೆ ಅಭಿಯಾನ ಶುರುವಾಗಿದೆ. 45 ವರ್ಷಗಳ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದರ ನಡುವೆಯೂ ಕೋವಿಡ್ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ಮಟ್ಟಹಾಕುವ ಉದ್ದೇಶದಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆಯನ್ನು ತೆಗೆದುಕೊಳ್ಳುವುದಕ್ಕೆ ಅನುಮತಿ ನೀಡಬೇಕೆಂದು ಭಾರತೀಯ ವೈದ್ಯಕೀಯ ಸಂಘಟನೆ ತಿಳಿಸಿದೆ.

ಇದೇ ವೇಳೆ ಖಾಸಗಿ ಕ್ಷೇತ್ರದ ಕುಟುಂಬ ಕ್ಲಿನಿಕ್ ಗಳನ್ನೂ ಲಸಿಕೆ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು ಪ್ರಧಾನಿ ಮೋದಿ ಸೂಚನೆ ನೀಡಬೇಕೆಂದು  ಐಎಂಎ ಸಲಹೆ ನೀಡಿದೆ. ಖಾಸಗಿ ವೈದ್ಯರು ಹಾಗೂ ಕ್ಲಿನಿಕ್‍ಗಳು ಲಸಿಕಾ ಅಭಿಯಾನದಲ್ಲಿ ಪಾಲ್ಗೊಳ್ಳುವುದರಿಂದ ಕೋವಿಡ್ ವಿರುದ್ಧದ ನಮ್ಮ ಹೋರಾಟಕ್ಕೆ ಸಹಕಾರಿಯಗಲಿದೆ ಎಂದು ಐಎಂಎ ತಿಳಿಸಿದೆ.

ಇನ್ನು ಸೋಮವಾರವಷ್ಟೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, 25 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು ಅನುಮತಿ ಕೋರಿ ಮನವಿ ಮಾಡಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next