Advertisement

ದೇಶದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ನೀಡುವ ಕೇಂದ್ರದ ನಿರ್ಧಾರಕ್ಕೆ ಐಎಮ್ಎ ಶ್ಲಾಘನೆ

08:34 PM Jun 07, 2021 | Team Udayavani |

ನವ ದೆಹಲಿ : ಜೂನ್ 21 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಮಂಡಳಿ(ಇಂಡಿಯನ್ ಮೆಡಿಕಲ್ ಅಸೋಸಿಯೇಶನ್) ಶ್ಲಾಘಿಸಿದೆ.

Advertisement

ಕೋವಿಡ್ -19 ವಿರುದ್ಧ ಭಾರತದ ಹೋರಾಟಕ್ಕೆ ಕೇಂದ್ರ ಸರ್ಕಾರದ ಈ ನಿರ್ಧಾರ ಸಹಾಯ ಮಾಡಲಿದೆ ಎಂದು ಐಎಮ್ಎ ಹೇಳಿದೆ.

 ಇದನ್ನೂ ಓದಿ : ಕೋವಿಡ್ ವಾಸಿಯಾದವರಲ್ಲಿ ಚರ್ಮರೋಗ : ದೆಹಲಿ, ಮುಂಬೈ ನಗರಗಳಲ್ಲಿ ಕಾಣಿಸಿಕೊಂಡ ಹೊಸ ಸಮಸ್ಯೆ

ಇಂದು(ಸೋಮವಾರ, ಜೂನ್ 7) ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದಿದ್ದರು.

“ದೇಶದ ಯಾವ ರಾಜ್ಯ ಸರ್ಕಾರವು ಲಸಿಕೆಗಳಿಗಾಗಿ ಖರ್ಚು ಮಾಡಬೇಕಾಗಿಲ್ಲ. ಈ ಹಿಂದೆ 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರೂ ಉಚಿತ ಲಸಿಕೆಗಳನ್ನು ಪಡೆಯುತ್ತಿದ್ದರು. ಈಗ 18 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳನ್ನು ನೀಡಲಿದ್ದೇವೆ ಎಂದು ಹೇಳಿದ್ದರು.

Advertisement

ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವೈದ್ಯಕೀಯ ಮಂಡಳಿಯ ರಾಷ್ಟ್ರೀಯ ಅಧ್ಯಕ್ಷ ಡಾ. ಜೆ. ಜಯಲಾಲ್, ಸಾರ್ವತ್ರಿಕ ಲಸಿಕಾ ಅಭಿಯಾನವು ಭಾರತವು ಸಾಂಕ್ರಾಮಿಕ ಬಿಕ್ಕಟ್ಟಿನಿಂದ ಹೊರಬರಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಘೋಷಿಸಿದ ಈ ನಿರ್ಧಾರಕ್ಕೆ  ಐಎಮ್ಎ ನಿರಂತರವಾಗಿ ಪ್ರೋತ್ಸಾಹ ನೀಡುತ್ತದೆ. ಇಂತಹ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕೆ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಈ ದಿಟ್ಟ ನಿರ್ಧಾರದಿಂದ ದೇಶ ಕೋವಿಡ್ ಸೋಂಕಿನ ಬಿಕ್ಕಟ್ಟಿನಿಂದ ಹೊರಬರಲು ಸಹಾಯವಾಗುತ್ತದೆ. ಕೋವಿಡ್ ಸೋಂಕನ್ನು ದೇಶದಿಂದ ಹೊರಕ್ಕೆ ಅಟ್ಟಲು ಸರ್ಕಾರದೊಂದಿಗೆ ಎಂದಿಗೂ  ಐಎಮ್ಎ ಶ್ರಮಿಸಲಿದೆ ಎಂದಿದ್ದಾರೆ.

ಇನ್ನು, ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್  ಸಿಂಗ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯ ಮೂಲಕ ಪ್ರಶಂಸಿಸಿದ್ದಾರೆ.


ಇದನ್ನೂ ಓದಿ : ಕೋವಿಡ್ ; ರಾಜ್ಯದಲ್ಲಿಂದು 27299 ಸೋಂಕಿತರು ಗುಣಮುಖ; 11958 ಹೊಸ ಪ್ರಕರಣ ಪತ್ತೆ

 

Advertisement

Udayavani is now on Telegram. Click here to join our channel and stay updated with the latest news.

Next