Advertisement

IMD Alerts: ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ 5 ರಾಜ್ಯದಲ್ಲಿ ಭಾರಿ ಮಳೆಯ ಎಚ್ಚರಿಕೆ

09:56 AM Aug 26, 2024 | Team Udayavani |

ನವದೆಹಲಿ: ಹವಾಮಾ ವೈಪರೀತ್ಯದಿಂದ ಮುಂದಿನ ಎರಡು ಮೂರೂ ದಿನಗಳ ಕಾಲ ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಅದರಂತೆ ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.

ವಾಯುವ್ಯ ಮಧ್ಯಪ್ರದೇಶ ಮತ್ತು ಪೂರ್ವ ರಾಜಸ್ಥಾನದ ಮೇಲೆ ಒತ್ತಡ ಹೆಚ್ಚಾಗಿದ್ದು, ಹವಾಮಾನ ಇಲಾಖೆ ಆಗಸ್ಟ್ 26 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪೂರ್ವ ಮತ್ತು ದಕ್ಷಿಣ ರಾಜಸ್ಥಾನ, ಗುಜರಾತ್, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಆಗಸ್ಟ್ 26 ರಿಂದ 29 ರವರೆಗೆ ಇದೇ ರೀತಿಯ ಪರಿಸ್ಥಿತಿಗಳು ಮುಂದುವರೆಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಗುಜರಾತ್ ನಲ್ಲಿ ಆಗಸ್ಟ್ 27ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ವಲ್ಸಾದ್ ಮತ್ತು ನವಸಾರಿ ಜಿಲ್ಲೆಗಳಲ್ಲಿ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಳೆದ 48 ಗಂಟೆಗಳಲ್ಲಿ ಸತತ ಮಳೆಯಿಂದಾಗಿ ತಗ್ಗು ಪ್ರದೇಶ ಜಲಾವೃತವಾಗಿತ್ತು. ಇದರಿಂದ ಇಲ್ಲಿ ಜನಜೀವನ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

Advertisement

ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ:
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ, ದಕ್ಷಿಣ ಮತ್ತು ಮಧ್ಯ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಉತ್ತರ ಕೊಂಕಣ ಮತ್ತು ಗೋವಾ, ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಲ್ಲದೆ, ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕ, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇದಲ್ಲದೆ, ಈಶಾನ್ಯ ಭಾರತ, ಸಿಕ್ಕಿಂ, ಉಪ ಹಿಮಾಲಯ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ತೆಲಂಗಾಣ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು. ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಪಶ್ಚಿಮ ರಾಜಸ್ಥಾನ, ಆಂಧ್ರಪ್ರದೇಶ, ಒಳ ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Delhi Hospital: ಚಿಕಿತ್ಸೆ ನೀಡುವಾಗ ನೋವಾಯಿತೆಂದು ವೈದ್ಯರಿಗೆ ಕಾಪಾಳಮೋಕ್ಷ ಮಾಡಿದ ರೋಗಿ

Advertisement

Udayavani is now on Telegram. Click here to join our channel and stay updated with the latest news.

Next