Advertisement
ಮೇ 5, 6ರಂದು ರಾಜ್ಯದ ವಿವಿಧೆಡೆ ಮಳೆರಾಜ್ಯದ ವಿವಿಧೆಡೆ ಗುರುವಾರ ಮಳೆಯಾಗಿದ್ದು, ಜೂನ್ ಮೊದಲ ವಾರದ ಬಳಿಕವೇ ಹೆಚ್ಚಿನ ಮಳೆ ನಿರೀಕ್ಷಿಸಬಹುದಾಗಿದೆ. ಅಲ್ಲಿವರೆಗೆ ತುಂತುರು ಮಳೆಯಷ್ಟೆ ಬೀಳಲಿದೆ. ಮೇ 5ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಮೇ 7ರಂದು ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಕೆಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಗುರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ. ಕಳೆದ 6 ತಿಂಗಳಿನಿಂದ ತಾಪಮಾನದಿಂದ ಬೆಂಗಳೂರು ಬೆಂದ ಕಾಳೂರಾಗಿ ಮಾರ್ಪಟ್ಟಿತ್ತು. ಬೆಂಗಳೂರಿಗರು ಉಷ್ಣಾಂಶದ ತೀವ್ರ ತೆಗೆ ಕಂಗೆಟ್ಟು ಹೋಗಿದ್ದರು. ಗುರುವಾರ ಸುರಿದ ಮಳೆಯಿಂದ ಬಿಸಿಲಿನ ಬೇಗೆಯಿಂದ ಬಳಲಿದವರು ಖುಷಿಪಟ್ಟರು.