ಚೆನ್ನೈ: ಭಾರೈ ಮಳೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಮತ್ತು ತಮಿಳುನಾಡಿನ ಹಲವಾರು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮಂಗಳವಾರ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದೆರಡು ದಿನಗಳಿಂದ ಚೆನ್ನೈನ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮಳೆಯಿಂದಾಗಿ ತಮಿಳುನಾಡಿನಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.
ಆಗ್ನೇಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಪಕ್ಕದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಸೇರಿದಂತೆ ಸುಮಾರು 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
60 ಮನೆಗಳು ನಾಶವಾಗಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ರಾಜ್ಯದ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಚೆನ್ನೈ, ಥೇಣಿ ಮತ್ತು ಮಧುರೈ ಜಿಲ್ಲೆಗಳಲ್ಲಿ ಸಾವುಗಳು ಸಂಭವಿಸಿವೆ.