ನವದೆಹಲಿ/ಬೆಂಗಳೂರು: ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಪಾಂಡಿಚೇರಿ, ಕೇರಳ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪ ಪ್ರದೇಶದಲ್ಲಿ ಅಕ್ಟೋಬರ್ 18ರಿಂದ 21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ಹವಮಾನ ಇಲಾಖೆ ಮಂಗಳವಾರ (ಅ.18) ಭವಿಷ್ಯ ನುಡಿದಿದೆ.
ಇದನ್ನೂ ಓದಿ:ನಾವು ಅಡಬೇಕಾದರೆ ಏಷ್ಯಾ ಕಪ್ ಬೇರೆ ದೇಶದಲ್ಲಿ ಮಾಡಿ: ಪಾಕ್ ಗೆ ತಂಡ ಕಳುಹಿಸಲು ಬಿಸಿಸಿಐ ನಕಾರ
ರಾಜಧಾನಿ ಬೆಂಗಳೂರು, ಕರಾವಳಿ ಭಾಗದಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದ್ದು, ವಾಯುವ್ಯ ಮತ್ತು ಮಧ್ಯಭಾರತದ ಹಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
48 ಗಂಟೆಗಳಲ್ಲಿ ನೈರುತ್ಯ ಮಾನ್ಸೂನ್, ವಿದರ್ಭ, ಚತ್ತೀಸ್ ಗಢ್, ಮಹಾರಾಷ್ಟ್ರ ಜಾರ್ಖಂಡ್, ಒಡಿಶಾದ ಹಲವು ಭಾಗ ಮತ್ತು ಪಶ್ಚಿಮಬಂಗಾಳದಲ್ಲಿ ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ.
ವಾಯುಭಾರ ಕುಸಿತ:
ಅಂಡಮಾನ್ ಮತ್ತು ನಿಕೋಬಾರ್ ಪ್ರದೇಶದ ಬಂಗಾಳಕೊಲ್ಲಿ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ವಾಯುಭಾರ ಕುಸಿತವಾಗಿದ್ದು, ವಾರಾಂತ್ಯದ ವೇಳೆಗೆ ಅದು ತೀವ್ರ ಸ್ವರೂಪ ಪಡೆದುಕೊಂಡು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಭಾರತೀಯ ಹವಾಮಾನ ಇಲಾಖೆಯ ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮಹಾಪಾತ್ರ ತಿಳಿಸಿದ್ದಾರೆ.
ಚಂಡಮಾರುತದ ತೀವ್ರತೆ ಅಥವಾ ಅದು ಹಾದು ಹೋಗುವ ಮಾರ್ಗದ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ನೀಡಬೇಕಾಗಿದೆ ಎಂದು ಮಹಾಪಾತ್ರ ಹೇಳಿದರು.