Advertisement

ಪಾಕ್‌ ವೇತನದಾರರಿಗೆ ತೆರಿಗೆ ಬರೆ! 16,000 ಕೋಟಿ ರೂ.ಸಂಗ್ರಹಿಸಲು ಪಾಕ್‌ ಸರ್ಕಾರ ನಿರ್ಧಾರ

08:20 PM Feb 05, 2022 | Team Udayavani |

ಇಸ್ಲಾಮಾಬಾದ್‌: ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ (ಐಎಂಎಫ್) ಸುಮಾರು 42 ಸಾವಿರ ಕೋಟಿ ರೂ. ಸಾಲ ಪಡೆಯಲಿರುವ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ಸರ್ಕಾರ, ಅದನ್ನು ತೀರಿಸುವ ಸಲುವಾಗಿ ದೇಶದ ವೇತನದಾರರ ಮೇಲಿನ ತೆರಿಗೆ ದರಗಳನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಿದೆ. ಹೆಚ್ಚಿನ ತೆರಿಗೆ ವಸೂಲಿಗಾಗಿ ಈಗಿರುವ ತೆರಿಗೆ ಸ್ಲಾಬ್‌ಗಳನ್ನು ಕಡಿಮೆ ಮಾಡಲು ತೀರ್ಮಾನಿಸಲಾಗಿದೆ. ಇದರಿಂದ ಅಲ್ಲಿನ ವೇತನದಾರರು ತತ್ತರಿಸಬಹುದು ಎಂದು ಅಂದಾಜಿಸಲಾಗಿದೆ.

Advertisement

ನ್ಯೂಸ್‌ ಇಂಟರ್‌ನ್ಯಾಷನಲ್‌ ವರದಿಯ ಪ್ರಕಾರ, 2022-23ರಲ್ಲಿ ತೆರಿಗೆಗಳ ಮೂಲಕ 16 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ, ವೈಯಕ್ತಿಕ ಆದಾಯ ತೆರಿಗೆ (ಪಿಐಟಿ) ಕಾಯ್ದೆಗೆ ತಿದ್ದುಪಡಿ ತರಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ. ತಿದ್ದುಪಡಿಗೊಂಡ ಅಂಶಗಳನ್ನು ಇದೇ ತಿಂಗಳ ಅಂತ್ಯಕ್ಕೆ ಪ್ರಕಟಗೊಳ್ಳಲಿರುವ ಅಲ್ಲಿನ ಕೇಂದ್ರ ಬಜೆಟ್‌ನಲ್ಲಿ ಉಲ್ಲೇಖಿಸಲಾಗುತ್ತದೆ. ಹೊಸ ನಿಯಮಗಳು ಇದೇ ವರ್ಷ ಜು. 1ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ವ್ಯಕ್ತಿಗೆ 10 ವರ್ಷ ಸಜೆ

ಕಲ್ಲಿದ್ದಲು ಗಣಿ ಸ್ಫೋಟ: 5 ಸಾವು
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಸರಾಗಹಿì ಪ್ರದೇಶದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿರುವುದಾಗಿ ಅಲ್ಲಿನ “ಅರಿ ನ್ಯೂಸ್‌’ ವಾಹಿನಿ ಶನಿವಾರ ವರದಿ ಮಾಡಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಗಣಿಯಲ್ಲಿ ಯಾವುದೇ ಸುರಕ್ಷತಾ ಕ್ರಮವಿರಲಿಲ್ಲ ಎಂದು ವಾಹಿನಿ ತನ್ನ ವರದಿಯಲ್ಲಿ ತಿಳಿಸಿದೆ. “ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು’ ಎಂದು ಬಲೋಚಿಸ್ತಾನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಹಾನಿರ್ದೇಶಕರು ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next