Advertisement

ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದ ನಿಯೋಗ

07:36 PM Sep 24, 2021 | Team Udayavani |

ಬೆಂಗಳೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ‌ ಒಕ್ಕೂಟದ ನಿಯೋಗವು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

Advertisement

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರೊಂದಿಗೆ ತೆರಳಿದ ನಿಯೋಗವು ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿತು.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು, ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಯಾವುದೇ ಜಾತಿಯನ್ನು ಪಟ್ಟಯಿಂದ ಕೈ ಬಿಡುವ ಪ್ರಸ್ತಾವನೆ ಇಲ್ಲ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ರಾಜ್ಯ ಸರ್ಕಾರ ತಿಳಿಸಬೇಕು. ಈ ಎರಡು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ನಿಯೋಗ ಮನವಿ ಸಲ್ಲಿಸಿತು.

ಸಚಿವರಾದ ಪ್ರಭು ಚೌಹಾಣ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ವೆಂಕಟರಮಣಪ್ಪ, ಶಿವರಾಜ ತಂಗಡಗಿ, ಸಂಸದ ಉಮೇಶ್ ಜಾಧವ್, ಶಾಸಕರಾದ ಚಂದ್ರಪ್ಪ, ಭೀಮಾ ನಾಯ್ಕ, ಅಖಂಡ ಶ್ರೀನಿವಾಸಮೂರ್ತಿ, ಪ್ರಕಾಶ್ ರಾಥೋಡ್, ಮಾಜಿ ಶಾಸಕ ವೆಂಕಟಸ್ವಾಮಿ, ಸೀತಾರಾಂ ಮತ್ತಿತರರು ನಿಯೋಗದಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next