Advertisement

ತ್ವರಿತವಾಗಿ ಸಾಲ ವಿತರಣೆ ಮಾಡದಿದ್ದರೆ ಕ್ರಮ: ಮುಖ್ಯಮಂತ್ರಿ ಸೂಚನೆ

02:22 AM Feb 12, 2021 | Team Udayavani |

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಮತ್ತು ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಣೆ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

Advertisement

ವಸತಿ ಮತ್ತು ಸ್ವೋದ್ಯೋಗ ಯೋಜನೆಗಳ ಫ‌ಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ವಿಳಂಬ ಧೋರಣೆ ತಾಳುತ್ತಿರುವುದು ಸರಿಯಲ್ಲ. ಇದರಿಂದ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಸಕಾಲದಲ್ಲಿ ಅನುಷ್ಠಾನವಾಗದು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಬ್ಯಾಂಕ್‌ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಬ್ಯಾಂಕ್‌ಗಳಿಂದ ಸಕಾಲಕ್ಕೆ ಸಾಲ ಸಿಗದ ಕಾರಣ ಬಜೆಟ್‌ ಗುರಿ ತಲುಪಲು ಸಾಧ್ಯವಾಗದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ಆವಾಸ್‌ ಮತ್ತು ಸ್ವನಿಧಿ ಯೋಜನೆಗಳು ಪ್ರಧಾನಿ ಮೋದಿ ಬಡವರಿಗಾಗಿ ಜಾರಿ ಗೊಳಿಸಿರುವ ಮಹತ್ವಾ ಕಾಂಕ್ಷೆಯ ಯೋಜನೆಗಳು. ಇವುಗಳ ಅನುಷ್ಠಾನಕ್ಕೆ ಬ್ಯಾಂಕ್‌ ಅಧಿಕಾರಿಗಳು ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈ ಎರಡೂ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ಇದಕ್ಕೆ ಸಾಲ ಮಂಜೂರಾತಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

15 ದಿನಗಳಲ್ಲಿ ಮಂಜೂರಾತಿ
ಪಿಎಂ ಆವಾಸ್‌ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್‌ ಬ್ಯಾಂಕ್‌ಗಳಿಗೆ ಸಲ್ಲಿಸಬೇಕು. ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಕಳುಹಿಸಿ ಮಂಜೂ
ರಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸಿಎಂ ಸೂಚಿಸಿದರು.

ವಸತಿ ಯೋಜನೆಗಳಿಗೆ ಸರಕಾರವು 2.70 ಲಕ್ಷ ರೂ. ನೆರವು ಕಲ್ಪಿಸಲಿದ್ದು, ಉಳಿದ 2 ಲಕ್ಷ ರೂ.ಗಳನ್ನು ಬ್ಯಾಂಕ್‌ಗಳು ಸಾಲವಾಗಿ ನೀಡಬೇಕಾಗಿದೆ. ಪ.ಜಾತಿ ಮತ್ತು ಪಂಗಡದವರಿಗೆ 3.50 ಲಕ್ಷ ರೂ. ನೆರವು ನೀಡಲಾಗುತ್ತಿದೆ.ಪಟ್ಟಣ ಪ್ರದೇಶದಲ್ಲಿ 3.40 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಹಣದ ಕೊರತೆ ಇಲ್ಲ, ಬಜೆಟ್‌ನಲ್ಲಿ ಸೂಕ್ತ ಅನುದಾನ ಸಿಗಲಿದೆ. ಮುಖ್ಯಮಂತ್ರಿಯವರ 1 ಲಕ್ಷ ಮನೆ ನಿರ್ಮಾಣ ಯೋಜನೆಯಡಿ 53 ಸಾವಿರ ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿದೆ.
– ವಿ. ಸೋಮಣ್ಣ , ವಸತಿ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next