ಹುಬ್ಬಳ್ಳಿ: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ ಹಾಕಿದ್ದು, ಮೀಸಲಾತಿ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ವಿಧಾನ ಮಂಡಲ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.
ಇದನ್ನೂ ಓದಿ:ಕೇಸರಿಬಾವುಟ ಹಿಡಿದ ಗುಂಪಿನಿಂದ ಅನ್ಯಕೋಮಿನ ವ್ಯಕ್ತಿಯ ಕಾರು ಜಖಂ: ಹರ್ಷ ಸಹೋದರಿ ವಿರುದ್ದ FIR
ಪಂಚಮಸಾಲಿ ಮೀಸಲಾತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಮೀಸಲಾತಿ ಕುರಿತು ಬೇರೆ ಬೇರೆ ಹಂತದಲ್ಲಿ ಹಿಂದುಳಿದ ವರ್ಗಗಳ ಆಯೋಗದಲ್ಲಿ ಚರ್ಚಾ ಹಂತದಲ್ಲಿವೆ. ಆಯಾ ಆಯೋಗದ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಸ್ಲಿಂ ಸೇರಿದಂತೆ ಇತರ ಜಾತಿಗಳ ಮೀಸಲಾತಿ ವಾಪಾಸು ಪಡೆಯುವ ಕುರಿತು ನಾನು ಏನೂ ಹೇಳಲಾರೆ. ಈ ಮೀಸಲಾತಿ ಕುರಿತು ಸಂವಿಧಾನದ ಅಡಿಯಲ್ಲಿ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಸರಕಾರ ನಡೆಯಲಿದೆ ಎಂದರಲ್ಲದೆ, ಈ ಕುರಿತು ಯಾರು ಏನೇ ಮಾತಾನಾಡಿದರೂ ಅದು ಅವರ ವೈಯಕ್ತಿಕ ಹೇಳಿಕೆ ಎಂದರು
ಶಿವಮೊಗ್ಗದಲ್ಲಿ ಹರ್ಷ ಕೊಲೆ ಹಾಗೂ ಮಹದಾಯಿ ಯೋಜನೆ ಕುರಿತು ಸಿಎಂ ಪ್ರತಿಕ್ರಿಯೆ ನೀಡದೆ ತೆರಳಿದರು.