Advertisement
ಎಕ್ಸ್ ಪೋಸ್ಟ್ ನಲ್ಲಿ ಲೋಕೇಶ್ ಚಂದ್ರಬಾಬು ನಾಯ್ಡುಅವರು, ಚಂದ್ರಬಾಬು ಅವರ ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿ “ಜೀವಕ್ಕೆ ನಿರಾಕರಿಸಲಾಗದ ಮತ್ತು ತತ್ ಕ್ಷಣದ ಬೆದರಿಕೆ ಇದೆ. ಅವರಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡಲಾಗುತ್ತಿದೆ. ಅವರ ಸುರಕ್ಷತೆಯು ಪ್ರಶ್ನಾತೀತವಾಗಿ ಅಪಾಯದಲ್ಲಿದೆ” ಎಂದು ಹೇಳಿಕೊಂಡಿದ್ದಾರೆ.
Related Articles
Advertisement
ನಿರೀಕ್ಷಣಾ ಜಾಮೀನು
ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಂಗಾಲು ಹಿಂಸಾಚಾರ ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ಹೈಕೋರ್ಟ್ ಗುರುವಾರ ತನ್ನ ಆದೇಶಗಳನ್ನು ಕಾಯ್ದಿರಿಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.ಇತ್ತೀಚೆಗೆ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ನಾಯ್ಡು ಅವರು ಅಂಗಲ್ಲು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದರು.
ಸುಪ್ರೀಂ ಕೋರ್ಟ್‌ಗೆ ಮೊರೆ
ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾದ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ಅವರನ್ನು ಸಿಐಡಿ ಕಳೆದ ತಿಂಗಳು ಬಂಧಿಸಿತ್ತು. ಅವರ ಜಾಮೀನು ಅರ್ಜಿಯನ್ನು ವಿಜಯವಾಡದ ಎಸಿಬಿ ನ್ಯಾಯಾಲಯ ತಿರಸ್ಕರಿಸಿದೆ. ಏತನ್ಮಧ್ಯೆ, ಇಂದು ಎಪಿ ಫೈಬರ್ ನೆಟ್ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ ಚಂದ್ರಬಾಬು ನಾಯ್ಡು ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.