Advertisement
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪಿಡಿಒಗಳ ಸಭೆ ನಡೆಸಿದ ಅವರು, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿದಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ. ಪಿಡಿಒಗಳು ತಮ್ಮ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಟ್ಟುಹೋಗಬಾರದು. ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮೀಣ ಜನತೆ ತಮ್ಮ ಬಳಿ ಬಂದರೆ ಆಯಾ ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ. ಗ್ರಾಮಸ್ಥರಿಂದ ದೂರು ಬರದಂತೆ ನೋಡಿಕೊಳ್ಳಬೇಕು.
ಕೊಡಲು ಒಪ್ಪದಿದ್ದರೆ ಆ ಬೋರ್ ವೆಲ್‌ನ್ನು ಸರ್ಕಾರದ ವಶಕ್ಕೆ ಪಡೆದು ನೀರು ಪೂರೈಕೆಗೆ ಕ್ರಮ ವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಿಮಗೆ ತಿಳಿಸಲಾಗಿದೆ. ಕೂಡಲೇ ಆ ಕೆಲಸ ಮಾಡಿ ಎಂದು ಶಾಸಕರು ತಾಕೀತು ಮಾಡಿದರು. ತಾಪಂ ಇಒ ಪ್ರಕಾಶ ಹಾಗೂ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿದ್ದರು.