Advertisement

ಸಾಫ್ಟ್ ವೇರ್‌ ಎಂಜಿನಿಯರ್‌ಗಳಿಗೆ ಅವಕಾಶಗಳು ಅಪಾರ

12:51 PM Dec 19, 2018 | Team Udayavani |

. ಸಾಫ್ಟ್ ವೇರ್‌  ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೇಗಿವೆ?
ಇತ್ತೀಚಿನ ದಿನಗಳಲ್ಲಿ ಸಾಫ್ಟ್ ವೇರ್‌ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಎಲ್ಲ ಕ್ಷೇತ್ರಗಳಲ್ಲಿಯೂ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಸಾಫ್ಟ್ ವೇರ್‌ಎಂಜಿನಿಯರಿಂಗ್‌ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಕಡಿಮೆಯಾಗುವುದಿಲ್ಲ.

Advertisement

. ಹೆಚ್ಚುತ್ತಿರುವ ತಂತ್ರಜ್ಞಾನ ಬಳಕೆಯಿಂದ ಸಾಫ್ಟ್ ವೇರ್‌ ಎಂಜಿನಿಯರ್‌ ಗಳಿಗೆ ಬೇಡಿಕೆ ಹೆಚ್ಚಾಗಿದೆಯೇ? ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಕಲಿಕೆಗೆ ಆಸಕ್ತಿ ತೋರಿಸುತ್ತಿದ್ದಾರೆಯೇ?
ತಂತ್ರಜ್ಞಾನ ಬೆಳವಣಿಗೆಯಿಂದ ಸಾಫ್ಟ್ ವೇರ್‌ ಎಂಜಿನಿಯರ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಕೂಡ ತಯಾರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಪಠ್ಯಗಳ  ಜತೆಗೆ ಅದಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಆನ್‌ಲೈನ್‌ ಮೂಲಕ ಕಲಿಯುವಲ್ಲಿ ಆಸಕ್ತಿ ತೋರುತ್ತಿದ್ದಾರೆ.

. ಸಾಫ್ಟ್ ವೇರ್‌ ಕ್ಷೇತ್ರದಲ್ಲಾಗುತ್ತಿರುವ ಹೊಸ ಬದಲಾವಣೆಗಳೇನು? ಇದಕ್ಕೆ ಯುವ ಜನರ ಸ್ಪಂದನೆ ಹೇಗಿದೆ?
ಸಾಫ್ಟ್ ವೇರ್‌  ಎಂಜಿನಿಯರ್‌ಗಳು ಇತ್ತೀಚಿನ ದಿನಗಳಲ್ಲಿ ಹೊಸತನದ ಕಡೆಗೆ ವಾಲುತ್ತಿದ್ದಾರೆ. ಯಂತ್ರಗಳು ಮಾತನಾಡುವ ತಂತ್ರಜ್ಞಾನಗಳವರೆಗೆ  ಸಾಫ್ಟ್ ವೇರ್‌ ಎಂಜಿನಿಯರ್‌ಗಳು ಯೋಚನೆ ಮಾಡುತ್ತಿದ್ದಾರೆ.

. ಇತರ ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಹೋಲಿಸಿದರೆ ಸಾಫ್ಟ್ ವೇರ್‌ ಎಂಜಿನಿಯರ್‌ ಕಲಿಕೆಗೆ ಆಸಕ್ತಿ ಹೇಗಿದೆ?
ಸಾಫ್ಟ್ ವೇರ್‌ ಎಂಜಿನಿಯರ್‌ ಕಲಿಕೆಗೆ ಆಸಕ್ತಿ ಕಡಿಮೆಯಾಗಲಿಲ್ಲ. ಸಾಫ್ಟ್ ವೇರ್‌ ಎಂಜಿನಿಯರ್‌ಗಳಿಗೆ ಉದ್ಯೋಗವಿಲ್ಲ ಎಂಬ ಭಯವನ್ನು ಕಳೆದ ಕೆಲವು ವರ್ಷಗಳ ಹಿಂದೆ ಹಬ್ಬಿಸಲಾಗಿದೆ. ವಾಸ್ತವದಲ್ಲಿ ಹಾಗೇನಿಲ್ಲ. ಹೆಚ್ಚಿನ ಮಂದಿಗೆ ಉದ್ಯೋಗ ದೊರೆಯುತ್ತಿದೆ. 

ಹೊಸ ಸಾಫ್ಟ್ ವೇರ್‌ ಅನ್ವೇಷಿಸುವಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೇಗಿದೆ?
ಆಸಕ್ತಿ ಸಾಲದು. ಹೊಸ ಸಾಫ್ಟ್ ವೇರ್‌ ಅನ್ವೇಷಿಸಲು ವಿದ್ಯಾರ್ಥಿಗಳನ್ನು ಪ್ರಾಧ್ಯಾಪಕರು ತಯಾರು ಮಾಡಬೇಕು. ಪಠ್ಯದ ಜತೆಗೆ ಪ್ರಾಯೋಗಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಕಾಲೇಜು ಹಂತದಲ್ಲಿಯೇ ಮಾಡಬೇಕಿದೆ. ಆಗ ಹೊಸ ಅನ್ವೇಷಣೆಯತ್ತ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುತ್ತದೆ.

Advertisement

 ನವೀನ್‌ ಭಟ್‌ ಇಳಂತಿಲ

Advertisement

Udayavani is now on Telegram. Click here to join our channel and stay updated with the latest news.

Next