Advertisement
ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯಿಂದ ಭಾರತ ರತ್ನ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಮಂಗಳವಾರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, 43 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ನ್ಯಾಕ್‌ನಲ್ಲಿ ಉತ್ತಮ ಸಾಧನೆ ಮಾಡಿದ ಸರಕಾರಿ ಕಾಲೇಜುಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ದ.ಕ. ಮತ್ತು ಉಡುಪಿಯಲ್ಲಿ ಪಾಠ ಮಾಡುವ ಶಿಕ್ಷಕರು ಸಹ ಕಲ್ಯಾಣ ಕರ್ನಾಟಕದಲ್ಲಿನ ಶಿಕ್ಷಕರ ರೀತಿಯಲ್ಲೇ ಟಿಸಿಎಚ್, ಬಿಎಡ್, ಎಂಎಡ್ ಓದಿ ಬಂದಿರುತ್ತಾರೆ. ಆದರೆ ಅಲ್ಲಿ ಉತ್ತಮ ಫಲಿತಾಂಶ ಬರುತ್ತದೆ. ಕರಾವಳಿ ಭಾಗದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಸ್ವಾತಂತ್ರ್ಯ ಪೂರ್ವದಿಂದಲೂ ಇರುವುದೂ ಇದಕ್ಕೆ ಕಾರಣವಾಗಿರಬಹುದು. ಆದರೂ ಈ ಬಗ್ಗೆ ವಿಚಾರ ವಿಮರ್ಶೆ ನಡೆಯುವ ಅಗತ್ಯವಿದೆ ಎಂದು ಸಿಎಂ ಹೇಳಿದರು.
Related Articles
Advertisement