ಶಿಡ್ಲಘಟ್ಟ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್‌ಆರ್‌ಸಿಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕಾಂಗ್ರೆಸ್ ಇನ್ನಿತರೆ ವಿರೋಧ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿ ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಿವೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ರಾಘವೇಂದ್ರ ಆರೋಪಿಸಿದರು.
ನಗರದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಅವರು, ದೇಶದ ಭದ್ರತೆಗಾಗಿ ಸಿಎಎ ಜಾರಿಗೊಳಿಸಿದೆ. ಆದರೆ ಕಾಂಗ್ರೆಸ್ ಮತ್ತು ಇನ್ನಿತರೆ ವಿರೋಧ ಪಕ್ಷಗಳು ಇಲ್ಲಸಲ್ಲದ ವದಂತಿಗಳನ್ನು ಸೃಷ್ಟಿಸಿ ಮುಸ್ಲಿಮರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಮಾತನಾಡಿ, ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳನ್ನು ವಿಪಕ್ಷಗಳು ಸಹ ಸ್ಮರಿಸುತ್ತವೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಗೊಳಿಸಿದ ಕೀರ್ತಿ ಅಟಲ್‌ಗೆ ಸಲ್ಲುತ್ತದೆ ಎಂದರು. ಸಿಎಎ ಹಾಗೂ ಎನ್‌ಆರ್‌ಸಿ ಬಗ್ಗೆ ಜನಜಾಗೃತಿ ಅಭಿಯಾನ ನಡೆಸಲಾಗುವುದು ಎಂದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಮೇಶ್ ಬಾಯಿರಿ, ನಗರಸಭಾ ಸದಸ್ಯ ನಾರಾಯಣಸ್ವಾಮಿ, ತಾಲೂಕು ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ನಟರಾಜ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಮ್ಮ, ಬೆಳ್ಳೂಟಿ ಸುಜಾತಮ್ಮ, ಭಾಜಪ ಮುಖಂಡ ಹೋಟೆಲ್ ಚಂದ್ರ, ಗೋವಿಂದ, ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಚಿಕ್ಕದಾಸರಹಳ್ಳಿ ಧಾಮೋದರ್, ಗ್ರಾಪಂ ಭೈರಾರೆಡ್ಡಿ, ದೇವರಾಜ್, ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್, ತಾಪಂ ಮಾಜಿ ಸದಸ್ಯ ಅರಿಕೆರೆ ಮುನಿರಾಜು, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣಾರೆಡ್ಡಿ, ದಿಬ್ಬೂರಹಳ್ಳಿ ಭಾಜಪ ಮುಖಂಡ ವೆಂಕಟೇಶ್‌ಗೌಡ, ಮಧು ಉಪಸ್ಥಿತರಿದ್ದರು.