Advertisement

ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಿ

12:18 PM Jul 06, 2017 | |

ಎನ್‌.ಆರ್‌.ಪುರ: ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ ಅಳವಡಿಸಿಕೊಳ್ಳುವ ಮೂಲಕ ದೇಶಕ್ಕೆ ಉತ್ತಮ ಕೊಡುಗೆ
ನೀಡಬೇಕೆಂದು ಸೇಂಟ್‌ ನೋಬರ್ಟ್‌ ಐಟಿಐ ಕಾಲೇಜಿನ ಮುಖ್ಯಸ್ಥ ಫಾದರ್‌ ಜೋಳಿ ವಿದ್ಯಾರ್ಥಿಗಳಿಗೆ ಕಿವಿಮಾತು
ಹೇಳಿದರು.

Advertisement

ತಾಲೂಕಿನ ಮೆಣಸೂರು ಗ್ರಾಮದ ಮೌಂಟ್‌ ಕಾರ್ಮೆಲ್‌ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಸಂಘಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.
ಕಾಲೇಜು ಹಂತದಲ್ಲಿ ಹೆಚ್ಚಿನ ಜ್ಞಾನ ಪಡೆಯುವ ನಿಟ್ಟಿನಲ್ಲಿ ಹೆಚ್ಚೆಚ್ಚು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ 
ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಜಿಪಂ ಸದಸ್ಯ ಪಿ.ಆರ್‌.ಸದಾಶಿವ ಮಾತನಾಡಿ, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳ ಮನಸ್ಸು ಚಂಚಲವಾಗಿರುತ್ತದೆ. ಯಾವುದೇ ಕಾರಣಕ್ಕೆ ತಪ್ಪುದಾರಿಗೆ ಹೋಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳಬೇಕು. ಪುಸ್ತಕ, ದಿನ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಬೇಕು. ದೇಶದ ಭವ್ಯ
ಸಂಸ್ಕೃತಿ ಕಾಪಾಡಿಕೊಂಡು ಕಠಿಣ ಪರಿಶ್ರಮದಿಂದ ಉತ್ತಮ ಅಂಕ ಗಳಿಸಬೇಕು. ಉತ್ತಮ ಸಂಸ್ಕಾರ, ಮೌಲ್ಯ
ಬೆಳೆಸಿಕೊಂಡಾಗ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗುತ್ತದೆ ಎಂದರು.

ಪ್ರಾಂಶುಪಾಲರಾದ ಸಿಸ್ಟರ್‌ ಶುಭಾ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ 
ಇ.ಸಿ.ಸೇವಿಯಾರ್‌, ಕಾರ್ಮೆಲ್‌ ವಿದ್ಯಾಸಂಸ್ಥೆ ವ್ಯವಸ್ಥಾಪಕಿ ಸಿಸ್ಟರ್‌ ಲತಾ, ಕಾರ್ಮೆಲ್‌ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಹಿರಿಯ ಶಿಕ್ಷಕಿ ಸಿಸ್ಟರ್‌ ಟೀನಾ, ಉಪನ್ಯಾಸಕರಾದ ಐ.ಎಂ.ರಾಜೀವ, ಸ್ವಪ್ನ, ಟಿ.ಮಂಜುನಾಥ್‌, ವಿದ್ಯಾರ್ಥಿಗಳಾದ ಶಾನಿಕ, ಮಧುರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next