Advertisement
ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಲ️ಯವಾರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ವೀಡಿಯೋ ಸಂವಾದವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
Related Articles
Advertisement
ಕೋವಿಡ್ 19 ಕುರಿತ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳನ್ನು ಹೆಚ್ಚು ಮಾಡಬೇಕಾಗಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಸೂಚಿಸಿದರು. ಆಸ್ಪತ್ರೆಯಿಂದ ಮನೆಗೆ ಮರಳುವವರಲ್ಲಿ ಪುನ: ಸೋಂಕು ಕಾಣಿಸಿಕೊಂಡಿರುವ ಪ್ರಕರಣಗಳೂ ಇರುವುದರಿಂದ ಅವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕಾಗಿದೆ ಎಂದು ತಿಳಿಸಿದರು.
ವಲ️ಯವಾರು ಆರ್ ಟಿಪಿಸಿಆರ್ ಪರೀಕ್ಷಾ ವರದಿ, ಮಾಸ್ಕ್ ಧರಿಸುವಿಕೆ ವರದಿಯನ್ನು ಪರಿಶೀಲಿಸಿದರಲ️್ಲದೆ, ಹೋಮ್ ಐಸೊಲೇಷನ್ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಹಾಗೂ ಸಂಪರ್ಕ ಪತ್ತೆಗೆ ಒತ್ತು ನೀಡಲು ಸೂಚನೆ ನೀಡಿದರು.ಸೋಂಕಿತರ ವಿಳಾಸಗಳು ತಪ್ಪಾಗಿರುವುದು ಮತ್ತು ಮೊಬೈಲ್ ಸಂಖ್ಯೆಗಳು ಸ್ವಿಚ್ ಆಫ್ ಆಗಿರುವುದರಿಂದ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಹೇಳಿದರು. ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರಾಗಿರುವವರ ಸಂಖ್ಯೆ ಹೆಚ್ಚಿದೆ. ನಗರದಲ್ಲಿ ಈವರೆಗೆ 20 ಲ️ಕ್ಷದ ಮೇಲೆ ತಪಾಸಣೆಗಳಾಗಿವೆ. ಪ್ರತಿ ದಿನ ಸರಿಸುಮಾರು 47 ಸಾವಿರ ತಪಾಸಣೆಗಳಾಗುತ್ತಿದೆ. ವಲ️ಯವಾರು – ಸಾವಿನ ಪ್ರಮಾಣ ನಾಲ್ಕೂ ವಲ️ಯಗಳಲ್ಲಿ ಕಡಿಮೆಯಾಗುತ್ತಿದ್ದು, ನಿಗದಿತ ಗುರಿಗಿಂತ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ ಎಂದು ಬಿ️.ಬಿ️.ಎಂ.ಪಿ ಆಯುಕ್ತರು ಸಭೆಗೆ ತಿಳಿಸಿದರು. ಆರ್.ಆರ್.ನಗರದಲ್ಲಿ ಪ್ರತಿ ಸೋಂಕಿತ ವ್ಯಕ್ತಿಗೆ ಕನಿಷ್ಠ 10 ಸಂಪರ್ಕ ಪತ್ತೆಯನ್ನು ಮಾಡಲಾಗುತ್ತಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಲಾಗಿದೆ. ಉಪಚುನಾವಣೆ ಇರುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಲ️ು ಪ್ರತ್ಯೇಕ ಎಸ್.ಒ.ಪಿ ಯನ್ನು ರೂಪಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವರು ಅಭಿಪ್ರಾಯಪಟ್ಟರು. 525 ಐ.ಸಿ.ಯು ಬೆಡ್‍ಗಳು ನಗರದ ಆಸ್ಪತ್ರೆಗಳಲ್ಲಿ ಲ️ಭ್ಯವಿದೆ. ವೆಂಟಿಲೇಟರ್‍ಗಳು ಹಾಗೂ ಐ.ಸಿ.ಯು ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ ಎಂದರು. ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಷಿಜನ್ ಘಟಕಗಳ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದ್ದು, ಬೆಡ್ ಆಕ್ಯುಪೆನ್ಸಿ ವಿವರಗಳನ್ನು ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ವಿವರಿಸಿದರು ರಾಜ್ಯದ ಒಟ್ಟು ಕೋವಿಡ್ 19 ಪ್ರಕರಣಗಳ ಪೈಕಿ ಅತಿ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿವೆ. ನಿರಂತರವಾಗಿ ಈ ನಿಟ್ಟಿನಲ್ಲಿ ಗಮನಹರಿಸುತ್ತಿರುವುದರಿಂದ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಬಿ️ಬಿ️ಎಂಪಿ ಆಯುಕ್ತರು ಹೇಳಿದರು. ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್‍ನಾರಾಯಣ್, ಸಚಿವ ಎಸ್.ಟಿ.ಸೋಮಶೇಖರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣರೆಡ್ಡಿ, ಬಿ️.ಬಿ️.ಎಂ.ಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.