Advertisement
ಜು. 15ರಂದು ಕಲ್ಲಡ್ಕ ಶ್ರೀ ರಾಮ ಹಿ.ಪ್ರಾ. ಶಾಲೆಯಲ್ಲಿ ಜಲಸಂರಕ್ಷಣೆಯನ್ನು ಉತ್ತೇಜಿಸುವುದಕ್ಕಾಗಿ ನಿರ್ಮಿಸಿದ ಮಳೆಕೊಯ್ಲು ಘಟಕವನ್ನು ಅವರು ಉದ್ಘಾಟಿಸಿ, ಶ್ರೀರಾಮ ಶಾಲೆಯಲ್ಲಿ ಮಳೆಕೊಯ್ಲು ಆರಂಭಿಸಿದ್ದು ಬಾಳ್ತಿಲ ಗ್ರಾಮಕ್ಕೇ ಹೆಮ್ಮೆ ಎಂದರು.
Related Articles
Advertisement
ಸಾಕಷ್ಟು ನೀರಿನ ಸಂಗ್ರಹಜು. 1ರಿಂದ ಆರಂಭಗೊಂಡ ಪ್ರಧಾನಿ ಮೋದಿಯವರ ಜಲಶಕ್ತಿ ಅಭಿಯಾನಕ್ಕೆ ಪೂರಕವಾಗಿ ಹನಿ ನೀರೂ ಪೋಲಾಗದಂತೆ ಶಾಲಾ ಕಟ್ಟಡದ ಮೇಲ್ಛಾವಣಿಗೆ ತಡೆಗೋಡೆ ನಿರ್ಮಿಸಿ 1,00,000 ಲೀ.ನಷ್ಟು ನೀರು ಸಂಗ್ರಹಿಸಲಾಗಿದೆ. ಇದನ್ನು ಇದ್ದಿಲು, ಮರಳು, ಜಲ್ಲಿ ಬಳಸಿ ಮಾಡಿದ ಸಾಂಪ್ರದಾಯಿಕ ಶುದ್ಧೀಕರಣ ಘಟಕದ ಮೂಲಕ ನೀರನ್ನು ಸಂಪ್‌ಗೆ ಹಾಯಿಸಲಾಗುತ್ತದೆ. ಹೆಚ್ಚುವರಿ ನೀರು ಸಂಗ್ರಹಕ್ಕಾಗಿ 1,25,000 ಲೀ. ಸಾಮರ್ಥ್ಯದ ಪ್ರತ್ಯೇಕ ಸಂಪನ್ನು ಶಾಲಾ ಆವರಣದೊಳಗೆ ನಿರ್ಮಿಸಲಾಗಿದೆ. ಸಂಪು ಭರ್ತಿಯಾದ ಅನಂತರ 2 ಎಚ್.ಪಿ. ಪಂಪ್‌ನ ಮೂಲಕ ನೀರು ಶೇಖರಿಸಲು 5,000 ಲೀ.ನ ಪ್ರತ್ಯೇಕ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಈ ಮಳೆಕೊಯ್ಲು ಘಟಕದ ಮೂಲಕ ಅಲ್ಪ ಮಳೆಯಾದರೂ ಸಾಕಷ್ಟು ನೀರಿನ ಸಂಗ್ರಹವಾಗುತ್ತದೆ. ಮಳೆಗಾಲ ಪೂರ್ತಿಯಾಗಿ ಅಂತರ್ಜಲ ಬಳಸದ ರೀತಿಯಲ್ಲಿ ಯೋಜಿಸಲಾಗಿದೆ. ಮೊದಲ ಹಂತದ ಯೋಜನೆಗೆ ಪೋಷಕರಿಂದ ಮತ್ತು ಗ್ರಾಮಸ್ಥರಿಂದ ಮೆಚ್ಚುಗೆ ಪಡೆದು ಮುಂದಿನ ಹಂತದಲ್ಲಿ ವಿದ್ಯಾಕೇಂದ್ರದ ಎಲ್ಲ ವಿಭಾಗಕ್ಕೂ ಸಮರ್ಪಕವಾಗಿ ಬಳಸಿಕೊಳ್ಳುವ ಚಿಂತನೆ ಕೈಗೊಳ್ಳಲಾಗಿದೆ.