Advertisement

ಮಹದಾಯಿ ಯೋಜನೆ ಜಾರಿಗೊಳಿಸಿ

11:23 AM Aug 03, 2019 | Team Udayavani |

ನರಗುಂದ: ಜೀವ ಜಲಕ್ಕಾಗಿ ಐದನೇ ವರ್ಷದಲ್ಲಿ ಈ ಭಾಗದ ರೈತರು ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದೇವೆ. ನ್ಯಾಯಾಧಿಕರಣ ಹಂಚಿಕೆ ಮಾಡಿದರೂ ಯೋಜನೆ ನೀರು ಇದುವರೆಗೆ ನಮ್ಮ ಮಲಪ್ರಭೆ ಒಡಲು ತುಂಬಿಲ್ಲ. ಇನ್ನಾದರೂ ಅನ್ನದಾತರ ಮೊರೆ ಆಲಿಸಿ ಮಹದಾಯಿ ಯೋಜನೆ ಜಾರಿಗೊಳಿಸಿ ಎಂದು ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ ಜನಪ್ರತಿನಿಧಿಗಳಿಗೆ ಒತ್ತಾಯಿಸಿದರು.

Advertisement

ಶುಕ್ರವಾರ ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ 1478ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು,ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರಗಳಿದ್ದರಿಂದ ಇದು ನಾಡಿನ ರೈತರಿಗೆ ವರದಾನವಾಗಲಿ. ನಾಡಿನ ಎಲ್ಲ ಸಂಸದರು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ಅಧಿಸೂಚನೆ ಹೊರಡಿಸಿ ಈ ಭಾಗದ ಅನ್ನದಾತರ ನೆರವಿಗೆ ಧಾವಿಸಬೇಕು ಎಂದು ಫಕೀರಪ್ಪ ಜೊಗಣ್ಣವರ ಆಗ್ರಹಿಸಿದರು.

ಸಮನ್ವಯ ಸಮಿತಿ ಸದಸ್ಯ ಅರ್ಜುನ ಮಾನೆ ಮಾತನಾಡಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಕುಡಿಯುವ ನೀರಿನ ದಾಹ ನೀಗಿಸಿ, ಈ ಭಾಗದಲ್ಲಿ ಹಸಿರು ಕ್ರಾಂತಿ ಸೃಷ್ಟಿಸುವ ಮಹದಾಯಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂದಾಗಬೇಕು. ಈ ಮೂಲಕ ಐದು ವರ್ಷದಿಂದ ಹೋರಾಟ ಮಾಡಿಕೊಂಡು ಬಂದ ರೈತರ ಶ್ರಮಕ್ಕೆ ಫಲ ದೊರಕಿಸಿಕೊಡಬೇಕು ಎಂದು ಸರ್ಕಾರಗಳಿಗೆ ಒತ್ತಾಯಿಸಿದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ, ಉಪಾಧ್ಯಕ್ಷ ರಮೇಶ ನಾಯ್ಕರ, ಯಲ್ಲಪ್ಪ ಗುಡದರಿ, ಲಕ್ಷ್ಮಣ ಮನೇನಕೊಪ್ಪ, ವೆಂಕಪ್ಪ ಹುಜರತ್ತಿ, ಮಲ್ಲಪ್ಪ ಐನಾಪುರ, ವಾಸು ಚವ್ಹಾಣ, ರಾಮಣ್ಣ ಸಾಬಳೆ, ಈರಣ್ಣ ಗಡಗಿ, ಮಲ್ಲೇಶಪ್ಪ ಬಾಳಿಕಾಯಿ, ಹನಮಂತ ಸರನಾಯ್ಕರ, ಹನಮಂತ ಕೋರಿ, ಅನಸಮ್ಮ ಶಿಂಧೆ, ನಾಗರತ್ನ ಸವಳಭಾಯಿ, ದೇವಕ್ಕ ತಾಳಿ, ಮಾಬೂಬಿ ಕೆರೂರ, ಚನ್ನವ್ವ ಕರ್ಜಗಿ ಸೇರಿ ಎಲ್ಲ ಹೋರಾಟಗಾರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next