Advertisement

Agriculture: ಕೃಷಿ ನವೋದ್ಯಮ ಯೋಜನೆ ಅನುಷ್ಠಾನ

01:26 AM Feb 02, 2024 | Team Udayavani |

ಉಡುಪಿ: ಕೃಷಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗೆ ಕೃಷಿಯಲ್ಲಿ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣವನ್ನು ಉತ್ತೇಜಿಸಲು ಕೃಷಿ ನವೋದ್ಯಮ ಕಾರ್ಯಕ್ರಮ ಅನುಷ್ಠಾನಗೊಳಿಸ ಲಾಗಿದ್ದು, ಈ ಯೋಜನೆ ಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

ಅರ್ಜಿ ಸಲ್ಲಿಸಲಾಗುವ ಕೃಷಿ ನವೋದ್ಯಮಗಳ ಪೈಕಿ ಅರ್ಹವಾದು ದನ್ನು ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿ, ಹೊಸ ಕೃಷಿ ನವೋದ್ಯಮಗಳಿಗೆ ಶೇ. 50ರಷ್ಟು ಕನಿಷ್ಠ 5 ಲಕ್ಷದಿಂದ ಗರಿಷ್ಠ 20 ಲ. ರೂ. ಹಾಗೂ ಈಗಾಗಲೇ ಸ್ಥಾಪಿಸಲಾದ ಕೃಷಿ ನವೋದ್ಯಮಗಳ ವಿಸ್ತರಣೆಗೆ ಕನಿಷ್ಠ 20 ಲ.ರೂ.ಗಳಿಂದ ಗರಿಷ್ಠ 50 ಲ.ರೂ. ವರೆಗೆ ಸಹಾಯಧನ ನೀಡಲಾಗುವುದು.

ಇದರೊಂದಿಗೆ ಆಯ್ಕೆಯಾದ ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿಗಾಗಿ ವಿವಿಧ ತರಬೇತಿ ಕೇಂದ್ರಗಳಲ್ಲಿ ಹಾಗೂ ಇನ್‌ಕ್ಯೂಬೇಷನ್‌ ಸೆಂಟರ್‌ಗಳಲ್ಲಿ ತರಬೇತಿ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next