Advertisement

ಜೀವನದಲ್ಲಿ ಪ್ರಜಾಸತ್ತಾತ್ಮಕ ತತ್ವಗಳ ಅಳವಡಿಕೆ ಅವಶ್ಯ

05:11 PM Mar 09, 2022 | Team Udayavani |

ಹುಬ್ಬಳ್ಳಿ: ಜನಪ್ರತಿನಿಧಿಗಳಾಗುವವರು ಜೀವನದಲ್ಲಿ ಪ್ರಜಾಸತ್ತಾತ್ಮಕ ತತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಶ್ರಮಿಸಬೇಕು ಎಂದು ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ಹೇಳಿದರು.

Advertisement

ನವನಗರದ ಕಾನೂನು ವಿವಿಯಲ್ಲಿ ಮಂಗಳವಾರ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸತ್ತು ಸುಧಾರಣಾ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ರಾದೇಶಿಕ ಮಟ್ಟದ ಮಾದರಿ ವಿಧಾನ ಮಂಡಲ ಅಧಿವೇಶನ ಸ್ಪರ್ಧಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಸಕ್ರಿಯವಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ತಮ್ಮ ವೃತ್ತಿ ಜೀವನವನ್ನು ಸೂಕ್ತವಾಗಿ ಕಟ್ಟಿಕೊಳ್ಳಬಹುದು ಎಂದರು.

ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಚಿಕ್ಕ ವಯಸ್ಸಿನಲ್ಲಿಯೇ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಮೈಗೂಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ವಿದ್ಯಾರ್ಥಿಗಳು ಶಾಸಕಾಂಗ ಸಭೆ ಮತ್ತು ಸಂಸತ್ತಿಗೆ ಪ್ರವೇಶಿಸಿದಾಗ ಉತ್ತಮ ಚರ್ಚೆಯನ್ನು ಮಾಡಬಹುದು. ಆದ್ದರಿಂದ ವಿವಿಧ ವಿಷಯಗಳ ಕುರಿತು ಚರ್ಚಿಸುವ ಈ ಸ್ಪರ್ಧೆಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಕಾನೂನು ಮತ್ತು ಸಂಸತ್ತು ಸುಧಾರಣಾ ಸಂಸ್ಥೆ ನಿರ್ದೇಶಕ ದ್ವಾರಕಾನಾಥ್‌ ಬಾಬು ಮಾತನಾಡಿ, ವಿಧಾನಮಂಡಲ ಅಧಿವೇಶನಗಳನ್ನು ಹೇಗೆ ನಡೆಸಬೇಕು ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಅದಕ್ಕಾಗಿಯೇ ಇಂತಹ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ಅದಕ್ಕಾಗಿಯೇ ಮಾದರಿ ವಿಧಾನಸಭೆ ಅಧಿವೇಶನ ಸ್ಪರ್ಧೆ ಎಂದು ಹೆಸರಿಸಲಾಗಿದೆ ಎಂದರು.

ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಯ 14 ಕಾನೂನು ಕಾಲೇಜುಗಳು, 60 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. 15 ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.ಕಾನೂನು ವಿವಿ ಕುಲಪತಿ ಪ್ರೊ| ಈಶ್ವರ ಭಟ್‌, ಮೌಲ್ಯಮಾಪನ ಕುಲಸಚಿವ ಡಾ|ಜಿ.ಬಿ. ಪಾಟೀಲ, ಡಾ| ರತ್ನಾ ಭರಮಗೌಡರ, ಡಿ. ರಂಗಸ್ವಾಮಿ, ಎನ್ನೆಸ್ಸೆಸ್‌ ಸಂಯೋಜಕ ರಾಜೇಂದ್ರ ಹಿಟ್ಟಣಗಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next