ಮಂಡ್ಯ: 2021-22ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮುಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅ ಧಿಸೂಚಿಸಿ ಅನುಷ್ಠಾನಗೊಳಿಸಲು ಅವಕಾಶವಿದೆ.
ಹಿಂಗಾರು ಹಂಗಾಮಿಗೆ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ದೂರು, ಮಂಡ್ಯ, ನಾಗಮಂಗಲ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕುಗಳ ಅ ಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ ಹುರುಳಿ (ಮಳೆಯಾಶ್ರಿತ) ಬೆಳೆಗೆ ರೈತರು ಬೆಳೆ ವಿಮೆಗೆ ನೋಂದಾಯಿಸಬಹುದಾಗಿದೆ.
ಇದನ್ನೂ ಓದಿ;- 1.83 ಲಕ್ಷ ಹೆಕ್ಟೇರ್ ಮುಂಗಾರು ಬೆಳೆಹಾನಿ
ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆ ಐಚ್ಛಿಕವಾಗಿದ್ದು, ಅ ಸೂಚಿಸಲಾದ ಬೆಳೆಗಳಿಗೆ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ್ ಸಂಖ್ಯೆ ನೀಡತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕ್‌ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.