Advertisement

ಏ.1ರಿಂದ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ಜಾರಿ: ಸಚಿವ ಸೋಮಶೇಖರ್

12:26 PM Feb 28, 2023 | Team Udayavani |

ಬೆಂಗಳೂರು: ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಐದು ಲಕ್ಷ ರೂ. ಸಾಲ ನೀಡುವ ಯೋಜನೆ ಪ್ರಾರಂಭಗೊಳ್ಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಜೆಟ್ ಘೋಷಣೆಯನ್ನು ಅತ್ಯಂತ ಶೀಘ್ರ ಅನುಷ್ಠಾನಕ್ಕೆ ತರುತ್ತೇವೆ. ಡಿಸಿಸಿ ಬ್ಯಾಂಕ್ ಗಳ ಮೂಲಕ ಸಾಲ ವಿತರಣೆ ಮಾಡಲಾಗುವುದು ಎಂದರು.

ಇದನ್ನೂ ಓದಿ:ಬಂಟ್ವಾಳ:ಕಾರು-ಸ್ಕೂಟರ್‌ ಅಪಘಾತದಲ್ಲಿ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಚಿಕಿತ್ಸೆ ಫಲಿಸದೆ ಸಾವು

ಈ ಯೋಜನೆಗೆ ಬಜೆಟ್ ನಲ್ಲಿ ಅನುಮತಿ ನೀಡಲಾಗಿದೆ. ಸದ್ಯದಲ್ಲೇ ರಾಜ್ಯಪಾಲರ ಅನುಮತಿ ಸಿಗಲಿದೆ. ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಈ ಯೋಜನೆ ಜಾರಿ ಮಾಡುತ್ತೇವೆ. ಒಟ್ಟು 33 ಲಕ್ಷ ಜನರಿಗೆ ಇದರ ಫಲಾನುಭವ ಸಿಗಲಿದೆ ಎಂದು ಹೇಳಿದರು.

ಹೈವೇ ಉದ್ಘಾಟನೆ: ಮಾರ್ಚ್ 11 ರಂದು ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇ ಲೋಕಾರ್ಪಣೆಯಾಗಲಿದೆ. ಪ್ರಧಾನಿ ಮೋದಿ ಆಗಮಿಸುವ ಸಾಧ್ಯತೆಯಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next