Advertisement

NEP ಜಾರಿ ಅವಸರದ ಕ್ರಮವಲ್ಲ: ಡಾ| ಸಿ.ಎನ್‌.ಅಶ್ವತ್ಥನಾರಾಯಣ

11:19 PM Sep 24, 2023 | Team Udayavani |

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ನಾವಾಗಬೇಕು ಎಂದು ಅವಸರದಿಂದ ಅದನ್ನು ಜಾರಿ ಮಾಡಿಲ್ಲ. ನಮ್ಮ ಎಲ್ಲ ಪ್ರಕ್ರಿಯೆಗಳು ಸರಾಗವಾಗಿ ಬೇಗನೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಲ್ಲರಿಗಿಂತ ಮೊದಲು ಈ ನೀತಿ ಜಾರಿಗೊಳಿಸಲು ನಮಗೆ ಸಾಧ್ಯವಾಯಿತು. ಈಗ ಬೇರೆ ರಾಜ್ಯಗಳು ಸಹ ಎನ್‌ಇಪಿಯನ್ನು ಜಾರಿಗೊಳಿಸುತ್ತಿವೆ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ, ಶಾಸಕ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

Advertisement

ರಾಜಾಜಿನಗರದ ಕೆಎಲ್‌ಇ ಕಾಲೇಜಿನಲ್ಲಿ ಅಖೀಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್‌ ಮಹಾಸಂಸ್ಥೆ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಸ್ಥೆ ಮತ್ತು ವಾಯ್ಸ ಆಫ್ ಬೆಂಗಳೂರು ಅಕಾಡೆಮಿಷಿಯನ್‌ ಸಂಸ್ಥೆ ಆಯೋಜಿಸಿದ್ದ ಎನ್‌ಇಪಿ 2020 -21ನೇ ಶತಮಾನದ ಅಗತ್ಯ ಎಂಬ ವಿಶೇಷ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯ ಸರಕಾರ ಏನೇ ಹೇಳಿದರೂ ಅಂತಿಮವಾಗಿ ಎನ್‌ಇಪಿಯನ್ನು ಜಾರಿಗೊಳಿಸಲೇಬೇಕು. ಉನ್ನತ ಶಿಕ್ಷಣವನ್ನು ನಿಯಂತ್ರಿಸುವ ಎಲ್ಲ ಸಂಸ್ಥೆಗಳು ಕೇಂದ್ರ ಸರಕಾರದ ಅಧೀನದಲ್ಲಿದೆ. ಶಿಕ್ಷಣವು ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿದೆ. ಸಮವರ್ತಿ ಪಟ್ಟಿಯಲ್ಲಿರುವ ಅಂಶಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಮಧ್ಯೆ ಸಂಘರ್ಷ ಏರ್ಪಟ್ಟರೆ ಕೇಂದ್ರದ ನಿಲುವೇ ಅಂತಿಮವಾಗುತ್ತದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next