ನಗರದ ಕೆನರಾ ಸಂಧ್ಯಾ ಕಾಲೇಜಿನ ಎನ್ವಿರೋನ್‌ಮೆಂಟ್ ಕ್ಲಬ್ ಆಶ್ರಯದಲ್ಲಿ ಮಳೆಕೊಯ್ಲು ಮಾಹಿತಿ ಕಾರ್ಯಕ್ರಮ ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.
Advertisement
ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಿಬಂದಿಗೆ ಮಳೆಕೊಯ್ಲು ಅಳವಡಿಕೆ ಮಾಡುವುದರಿಂದ ಆಗುವ ಪ್ರಯೋಜನ ಹಾಗೂ ಅದರ ಅಳವಡಿಕೆ ಕ್ರಮಗಳ ಬಗ್ಗೆ ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲಾºವಿ ಅವರು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ| ಸಾವಿತ್ರಿ, ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕ ಸಿಎ ವಾಮನ್ ಕಾಮತ್, ಎನ್‌ಐಟಿಕೆ ನಿವೃತ್ತ ಪ್ರಾಂಶುಪಾಲ ಪ್ರೊ| ಸಿ.ಜಿ. ರೈ, ಕಾರ್ಯಕ್ರಮ ಸಂಯೋಜಕಿ ಪ್ರೊ| ಧನ್ಯಾಶ್ರೀ ಮೊದಲಾದವರು ಉಪಸ್ಥಿತರಿದ್ದರು.
ಮೂಡುಬಿದಿರೆಯ ಬೈಲಾರೆ ನಿವಾಸಿ ಉಮೇಶ್ ಭಟ್ ಅವರು ಹತ್ತು ದಿನಗಳ ಹಿಂದೆ ತಮ್ಮ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ತಮ್ಮ ಮನೆಯಲ್ಲಿ 2006ರಲ್ಲಿ ನಿರ್ಮಿಸಿದ ಬಾವಿಯಲ್ಲಿ ಮೊದಲ ಎರಡು ವರ್ಷಗಳ ಕಾಲ ಯಥೇತ್ಛವಾಗಿ ನೀರಿತ್ತು. ಆದರೆ ಬಳಿಕ ನೀರಿನ ಮಟ್ಟ ಕಡಿಮೆಯಾಗತೊಡಗಿತ್ತು. ಇದೇ ಕಾರಣಕ್ಕೆ ಸ್ಥಳೀಯಾಡಳಿತದ ನೀರು ಉಪಯೋಗಿಸುತ್ತಿದ್ದರು. ಆದರೆ ನೀರು ಶುದ್ಧವಾಗಿಲ್ಲದ್ದರಿಂದ ಇದೀಗ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ.
Related Articles
Advertisement
ಉಮೇಶ್ ಭಟ್ ಸುದಿನಕ್ಕೆ ಪ್ರತಿಕ್ರಿಯಿಸಿ ಸುದಿನದಲ್ಲಿ ಪ್ರಕಟವಾಗುತ್ತಿರುವ ಮನೆಮನೆಗೆ ಮಳೆಕೊಯ್ಲು ಅಭಿಯಾನವನ್ನು ಓದುತ್ತಿದ್ದೇನೆ. ಸಾರ್ವಜನಿಕರಿಗೆ ಉತ್ತಮ ಮಾಹಿತಿ ದೊರೆಯುತ್ತಿದೆ. ಪ್ರತಿಯೊಬ್ಬರು ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದರೆ ಬೇಸಗೆಯಲ್ಲಿ ನೀರಿನ ಬಗ್ಗೆ ಕಳವಳ ಪಡಬೇಕಾಗಿಲ್ಲ ಎಂದರು.
ನೀವೂ ಅಳವಡಿಸಿ, ವಾಟ್ಸಪ್ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000