Advertisement

144 ಸೆಕ್ಷನ್‌ ಜಾರಿ: ನಾಳೆ ಶಿವಮೊಗ್ಗ,ಭದ್ರಾವತಿ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ

09:09 PM Aug 15, 2022 | Suhan S |

ಶಿವಮೊಗ್ಗ: ನಗರದಲ್ಲಿ ನಡೆದ ಸಾವರ್ಕರ್ – ಟಿಪ್ಪು ಫೋಟೋ ವಿವಾದದಿಂದ 144 ಸೆಕ್ಷನ್‌ ಜಾರಿಯಾಗಿರುವುದರಿಂದ ಮಂಗಳವಾರ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ 16/08/2022  ರಂದು (ಮಂಗಳವಾರ) ರಜೆ ಘೋಷಿಸಲಾಗಿದೆ.

Advertisement

ಸ್ವಾತಂತ್ರ್ಯ ದಿನಕ್ಕಾಗಿ ನಗರದ ಅಮೀರ್ ಅಹಮದ್ ಸರ್ಕಲ್ ನಲ್ಲಿ ಸಾವರ್ಕರ್ ಫೋಟೋ ಹಾಕಲಾಗಿದ್ದು, ಒಂದು ಕೋಮು ಸಾವರ್ಕರ್ ಫೋಟೋ ತೆಗೆದು, ಟಿಪ್ಪು ಫೋಟೋ ಹಾಕಲು ಪಟ್ಟು ಹಿಡಿದ್ರೆ, ಮತ್ತೊಂದು ಕೋಮು ಫೋಟೋ ತೆಗೆಯಲು ಯತ್ನಿಸಿದವರ ವಿರುದ್ಧ ಪ್ರತಿಭಟನೆ ನಡೆಸಿತು. ಪರಿಸ್ಥಿತಿ ಕೈಮೀರುವ ಹಂತಕ್ಕೆ ಬಂದಾಗ ಪೊಲೀಸರು ಎರಡೂ ಗುಂಪಿನ ಮೇಲೆ ಲಘು ಲಾಠಿ ಪ್ರಹಾರ ನಡೆಸಿದರು.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ – ಟಿಪ್ಪು ಫೋಟೋ ವಿವಾದದ ಬೆನ್ನಲ್ಲೇ  ಯುವಕನಿಗೆ ಚೂರಿ ಇರಿತ

ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿ ಹಾಗೂ ಭದ್ರಾವತಿ ನಗರದಲ್ಲಿ 144 ಸೆಕ್ಷನ್‌ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಮಂಗಳವಾರ 16/08/2022 ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ

ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ
ಶಿವಮೊಗ್ಗ: ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.

Advertisement

ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next