Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ವರ್ಷಗಳ ಹಿಂದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಆದರೆ ಕೆಲವು ಬದಲಾವಣೆಗಳಿಂದಾಗಿ ಪದವಿ ಮತ್ತು ಉನ್ನತ ಶಿಕ್ಷಣ ಹಂತದಲ್ಲಿ ಅಭ್ಯಾಸಕ್ಕೆ ತೊಂದರೆ ಎದುರಾಗಿದೆ ಎಂದು ತಜ್ಜರು ಹೇಳುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಕ್ಷಣ ತಜ್ಞರ ಸಭೆ ಕರೆದು ಸಾಧಕ-ಬಾಧಕ ಚರ್ಚಿಸಿಯೇ ಎಸ್‌ಇಪಿ ಜಾರಿಗೆ ತರಲಾಗು ವುದು. ಈ ನಿಟ್ಟಿನಲ್ಲಿ ಶೀಘ್ರವೇ ರಾಜ್ಯ ಸರಕಾರದಿಂದ ನೀತಿ ಪ್ರಕಟಿಸಲಾಗುವುದು. ಶಿಕ್ಷಣದ ಗುಣಮಟ್ಟ ಮತ್ತು ಕಲಿಕೆಯಲ್ಲಿ ಅಗಾಧ ರೀತಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ನಾವು ನಮ್ಮ ಪದ್ಧತಿಯಲ್ಲಿಯೇ ಮಕ್ಕಳಿಗೆ ಪಾಠದ ಜತೆಯಲ್ಲಿ ಕೌಶಲ ನೀಡಬೇಕಾದ ಅಗತ್ಯವಿದೆ ಎಂದರು.
ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಉನ್ನತ ಶಿಕ್ಷಣ ಸೇರಿ ಶಿಕ್ಷಣ ಕ್ಷೇತ್ರಕ್ಕೆ ಒಟ್ಟಾರೆ ಶೇ.6ರಷ್ಟು ಅನುದಾನ ಆಯವ್ಯಯದಲ್ಲಿ ಹಂಚಿಕೆ ಮಾಡಲಾಗುತ್ತದೆ. ಆದರೂ ನಮಗೆ ಇದರಲ್ಲಿ ಉನ್ನತ ಶಿಕ್ಷಣಕ್ಕೆ ಲಭ್ಯವಾಗುವುದು ಶೇ.1.70ರಷ್ಟು ಮಾತ್ರ. ಹಂಚಿಕೆಯಾದ ಅನುದಾನದಲ್ಲಿ ಶೇ.88ರಷ್ಟು ಉಪನ್ಯಾಸಕರು ಹಾಗೂ ಇತರ ಸಿಬಂದಿ ಸಂಬಳಕ್ಕೆ ವಿನಿಯೋಗಿಸಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಕಳೆದ 10 ವರ್ಷದಿಂದ ಇಲಾಖೆಗೆ ಹಂಚಿಕೆಯಾಗುವ ಅನುದಾನದಲ್ಲಿ ಹೆಚ್ಚಳ ಮಾಡಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆ ಗುಣಪಡಿಸಲು ನಿರೀಕ್ಷಿತ ಮಟ್ಟದಲ್ಲಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬರುವ ಆಯವ್ಯಯದಲ್ಲಿ ಇಲಾಖೆಗೆ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ ಎಂದರೆ. ಪ್ರಸ್ತುತ ರಾಜ್ಯದಲ್ಲಿ 32 ಸರಕಾರಿ ವಿಶ್ವವಿದ್ಯಾಲಯಗಳಿವೆ. ಗುವಿವಿ ಸೇರಿದಂತೆ ಒಟ್ಟಾರೆ 15 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಉಪನ್ಯಾಸಕ ಹುದ್ದೆ ಭರ್ತಿಗೆ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಗುಲ್ಬರ್ಗ ವಿವಿ ಕುಲಪತಿ ಪ್ರೊ| ದಯಾನಂದ ಅಗಸರ್ ಇದ್ದರು.
Related Articles
– ಡಾ|ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
Advertisement
ನಾಳೆ ಪದವಿ ಕಾಲೇಜುಗಳಲ್ಲಿ ಯೋಗ ದಿನಬೆಂಗಳೂರು: ಬುಧವಾರ (ಜೂ.21) ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆಚರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಜೂ. 21ರಂದು ಕಾಲೇಜುಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಮೂಲಕ ಯೋಗದ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆ ತಿಳಿಸಿದೆ. ಯೋಗ ದಿನಾಚರಣೆ ಫೋಟೋಗಳನ್ನು ಕಾಲೇಜಿನ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವಂತೆಯೂ ಸೂಚನೆ ನೀಡಲಾಗಿದೆ. ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಿಸಿಕೊಳ್ಳುವಂತಿಲ್ಲ
ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳದಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
2023-24ನೇ ಸಾಲಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನೀಡಲಾದ ಷರತ್ತುಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಮತ್ತು ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳಲು ಯಾವುದೇ ಷರತ್ತು ಇಲ್ಲವೆಂಬುದಾಗಿ ಉಲ್ಲೇಖೀಸಿರುವುದನ್ನು ಪರಿಶೀಲಿಸಲಾಗಿದೆ. 1993 ಕರ್ನಾಟಕ ಆ್ಯಕ್ಟ್ 14, ಪಂಚಾಯತ್ ರಾಜ್ 12 (ಜಿ) ಪ್ರಕಾರ ರಾಜ್ಯ ಸರಕಾರದ ಅಥವಾ ಸರಕಾರದ ನಿಯಂತ್ರಣಕ್ಕೆ ಒಳಪಟ್ಟಿರುವ ಯಾವುದೇ ಸ್ಥಳೀಯ ಅಥವಾ ಇತರ ಪ್ರಾಧಿಕಾರದಲ್ಲಿ ಲಾಭದಾಯಕ ಹುದ್ದೆ ಹೊಂದಿದ್ದರೆ ಸದಸ್ಯರಾಗಲು ಅನರ್ಹರಾಗಿರುತ್ತಾರೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳದಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ನಿಯಮ ಪಾಲನೆ ಕಡ್ಡಾಯ
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಸ್ವಯಂ ವಿವೇಚನಾ ಅಧಿಕಾರ ಇರುವುದಿಲ್ಲ. ಸಮಿತಿ ಅಧ್ಯಕ್ಷರು ಸಹ ಸರಕಾರ/ ಇಲಾಖೆ ನೀತಿ ಪಾಲಿಸುವುದು ಕಡ್ಡಾಯವಾಗಿರುತ್ತದೆ. ಇಂತಹ ಪ್ರಕರಣ ಇಲಾಖೆಯ ಗಮನಕ್ಕೆ ಬಂದ ಕೂಡಲೇ ಕ್ಷೇತ್ರ ಮಟ್ಟದ ಅಧಿಕಾರಿಗಳು ಕೂಡಲೇ ಚಾಲ್ತಿ ನಿಯಮಗಳನ್ನು ಉಲ್ಲೇಖೀಸಿ ಹಿಂಬರಹ ನೀಡಲು ಹಾಗೂ ಅಗತ್ಯವಿದ್ದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದಲೂ ಪಂಚಾಯತ್ ರಾಜ್ ನಿಯಮಗಳ ವಿವರಗಳನ್ನು ಪಡೆದು ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.