Advertisement

15 ದಿನಗಳಲ್ಲಿ ಘನ ತ್ಯಾಜ್ಯ ಸಂಸ್ಕರಣೆ ಘಟಕ ಅಳವಡಿಕೆ ಕಡ್ಡಾಯ: ಅಜಿತ್‌ ಕುಮಾರ್‌ ಹೆಗ್ಡೆ

10:18 PM Sep 27, 2019 | mahesh |

ಮಹಾನಗರ: ನಗರದ ಅಪಾರ್ಟ್‌ಮೆಂಟ್‌, ಹೊಟೇಲ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಕ್ಯಾಟರಿಂಗ್‌ ಸಂಸ್ಥೆಗಳು ಸಹಿತ ಹೆಚ್ಚು ಘನ ತ್ಯಾಜ್ಯ ಉತ್ಪಾದಿಸುವ ಸ್ಥಳಗಳಲ್ಲಿ ಮುಂದಿನ 15 ದಿನಗಳಲ್ಲಿ ಘನ ತ್ಯಾಜ್ಯ ಸಂಸ್ಕರಣೆ ಘಟಕ ಅನುಷ್ಠಾನಕ್ಕೆ ತರಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಸೂಚನೆ ನೀಡಿದ್ದಾರೆ.

Advertisement

ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು. ಹೆಚ್ಚು ಘನತ್ಯಾಜ್ಯ ಉತ್ಪಾದಿಸುವ ಸ್ಥಳ ಗಳಲ್ಲಿ ಘನ ತ್ಯಾಜ್ಯ ಸಂಸ್ಕರಣೆ ಘಟಕಗಳ ಅಳವಡಿಕೆ ಬಗ್ಗೆ ಈ ಹಿಂದೆ ತಿಳಿಸಿದ್ದರೂ ಬಹುತೇಕ ಮಂದಿ ಗಂಭೀರವಾಗಿ ಪರಿಗಣಿ ಸಿಲ್ಲ. ಇದರ ಪರಿಣಾಮವೇ ಪಚ್ಚ ನಾಡಿ ದುರಂತ. ನಮ್ಮೆಲ್ಲರ ಬೇಜವಾಬ್ದಾರಿಯಿಂದಾಗಿ ಅನೇಕ ಮಂದಿ ತಮ್ಮ ಮನೆಮಠ ಕಳೆದುಕೊಳ್ಳುವಂತಾಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ನಿಯಮ ಪಾಲಿಸಬೇಕಾಗಿದೆ ಎಂದರು.

ಘನ ತ್ಯಾಜ್ಯ ವಿಲೇವಾರಿ ಕಾಯ್ದೆ ಪ್ರಕಾರ ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದವರಿಗೆ, ರಸ್ತೆಬದಿಗಳಲ್ಲಿ ತ್ಯಾಜ್ಯ ಎಸೆಯುವವರಿಗೆ ದೊಡ್ಡ ಮೊತ್ತದ ದಂಡ ವಿಧಿಸಲು ಅವಕಾಶವಿದೆ ಎಂದರು.

ಹೊಟೇಲ್‌ ಮಾಲಕರ ಸಂಘ, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲಕರ ಸಂಘ, ಕಲ್ಯಾಣ ಮಂಟಪಗಳ ಮಾಲಕರ ಸಂಘ, ಕ್ಯಾಟರಿಂಗ್‌ ಸಂಸ್ಥೆಗಳ ಮಾಲಕರ ಸಂಘ, ವ್ಯಾಪಾರಿಗಳ ಸಂಘ, ಕೋಳಿ ಮಾರಾಟಗಾರರ ಸಂಘ, ಅಪಾರ್ಟ್‌ಮೆಂಟ್‌ ಅಸೋಸಿಯೇಶನ್‌, ಸಣ್ಣ ಕೈಗಾರಿಕೆಗಳ ಸಂಘ, ಬಿಲ್ಡರ್‌ಗಳ ಸಂಘ, ಸಿವಿಲ್‌ ಎಂಜಿನಿಯರ್‌ಗಳ ಸಂಘದ ಪ್ರತಿನಿಧಿಗಳು ಭಾಗವಹಿಸಿದ್ದರು.

ಪಾಲಿಕೆ ಉಪಾಯುಕ್ತೆ (ಕಂದಾಯ) ಗಾಯತ್ರಿ ನಾಯಕ್‌, ಮಾಲಿನ್ಯ ನಿಯಂತ್ರಣ ಮಂಡಳಿ ವೈಜ್ಞಾನಿಕ ಅಧಿಕಾರಿ ಜಯಪ್ರಕಾಶ್‌, ಪರಿಸರ ಎಂಜಿನಿಯರ್‌ಗಳಾದ ಮಧು ಮನೋಹರ್‌, ಶಬರೀನಾಥ್‌ ರೈ ಮೊದಲಾದವರು ಉಪಸ್ಥಿತರಿದ್ದರು.

Advertisement

ತ್ಯಾಜ್ಯ ಸಂಸ್ಕರಣೆ ಪ್ರಾತ್ಯಕ್ಷಿಕೆ
ಚೆನ್ನೈ, ಬೆಂಗಳೂರು, ಮಂಗಳೂರಿನ ಘನ ತ್ಯಾಜ್ಯ ಸಂಸ್ಕರಣೆ ಮಾಡುವ ಸಾಧನಗಳನ್ನು ತಯಾರಿಸುವ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಯಾವ ರೀತಿ ತ್ಯಾಜ್ಯಗಳನ್ನು ವಿಲೇವಾರಿ ಮಾಡಬಹುದು ಎಂದು ಪ್ರಾತ್ಯಕ್ಷಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next