Advertisement
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ವಲ್ಲಭಾಯಿ ರಸ್ತೆಯಲ್ಲಿರುವ ಎಂ. ಕೃಷ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಅತಿಸಾರ ಭೇದಿ ತೀವ್ರತರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜನಾರ್ದನ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವತಿಯಿಂದ 5 ವರ್ಷದ ಒಳಗಿನ ಮಕ್ಕಳಿರುವ ಮನೆಗಳಿಗೆ ಭೇಟಿ ನೀಡಿ ಶುಚಿತ್ವದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕೈ ತೊಳೆಯುವ ವಿಧಾನಗಳನ್ನು ತಿಳಿಸಿಕೊಡಬೇಕು ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ ಅವರು ಮಾತನಾಡಿ, ಒಆರ್‌ಎಸ್ ಸಾವಿರಾರು ಜೀವಗಳನ್ನು ಉಳಿಸಿದೆ. ಆದ್ದರಿಂದ ಈ ಔಷಧಿಯು ಆಸ್ಪತ್ರೆಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಚಿತವಾಗಿ ಸಿಗುವಂತಾಗಬೇಕು ಈ ಮೂಲಕ ಇಂತಹ ಕಾಯಿಲೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಜಿಲ್ಲಾಧಿಕಾರಿಗಳಿಂದ ಒಆರ್‌ಎಸ್ ಪ್ಯಾಕೆಟ್‌ಗಳನ್ನು ವಿತರಿಸಲಾಯಿತು, ಅಲ್ಲದೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿಗಳ ತಂಡದಿಂದ ಕೈ ತೊಳೆಯುವ ಪ್ರಾತ್ಯಕ್ಷಿಕೆ ನೀಡಲಾಯಿತು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ರಾಜ್‌ಗೊಪಾಲ್, ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ಎಂ.ಕೃಷ್ಣ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ವಿಜಯಕುಮಾರಿ, ಕಾರ್ಯಕ್ರಮ ಅಧಿಕಾರಿ ಡಾ.ಹೇಮಲತಾ ಮತ್ತಿತರರು ಉಪಸ್ಥಿತರಿದ್ದರು.