Advertisement

ಮೈತ್ರಿ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ ಅಸಾಧ್ಯ; ನಾವೇ ಸರ್ಕಾರ ಮಾಡುತ್ತೇವೆ: ಎಚ್ ಡಿಕೆ

12:26 PM Oct 20, 2022 | Team Udayavani |

ಮೈಸೂರು: ಮುಂದಿನ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ. ತಾಯಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಚಿತವಾದ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು, ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನು ಸ್ವೀಕರಿಸಿದ್ದೇನೆ. ಜನರು ಉತ್ತಮ ಬದುಕು ಕಟ್ಟಿಕೊಡುತ್ತೇನೆ. ಅಂತಹ ಸರ್ಕಾರ ಅಧಿಕಾರಕ್ಕೆ ತರುತ್ತೇವೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ. ಒಂದು ವೇಳೆ ಈ ಯೋಜನೆ ಅನುಷ್ಠಾನ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದರು.

ಕಳೆದ ಬಾರಿ ಸಿಎಂ ಆಗಿದ್ದಾಗ ಸ್ಪಷ್ಟ ಬಹುಮತ ಬರದಿದ್ದರೂ ರೈತರ ಸಾಲ ಮನ್ನಾ ಮಾಡಿ ನುಡಿದಂತೆ ನಡೆದಿದ್ದೇನೆ. ಸಂಪೂರ್ಣ ಒಂದು ಸರ್ಕಾರ ಹೇಗೆ ನಡೆಸಬಹುದು ಅಂತ ತೋರಿಸುವ ಸವಾಲು ಸ್ವೀಕರಿಸಿದ್ದೇನೆ. ಹೊಂದಾಣಿಕೆ ಅಥವಾ ಮೈತ್ರಿ ಸರ್ಕಾರ ಮಾಡಿದರೆ ಜನಪರ ಯೋಜನೆ ಅನುಷ್ಠಾನ ಮಾಡಲು ಆಗಲ್ಲ. ಆ ಕಾರಣ ಪಕ್ಷ ವಿಸರ್ಜನೆ ಬಗ್ಗೆ ಹೇಳಿದೆ ಎಂದರು.

ಇದನ್ನೂ ಓದಿ:ಭರ್ಜರಿ ಮೊತ್ತಕ್ಕೆ ಓಟಿಟಿಗೆ ಸೇಲಾಯ್ತು ಧನಂಜಯರ ‘ಹೆಡ್ ಬುಷ್’ ಸಿನಿಮಾ

ಜನಪರ ಯೋಜನೆ ಚಾಚೂ ತಪ್ಪದೆ ಜಾರಿಗೊಳಿಸಲು 123 ಸೀಟ್ ಪಡೆಯುವುದು ನನ್ನ ಗುರಿ. ಇಂದಿನ ಜೆಡಿಎಸ್ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪಂಚರತ್ನ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡುತ್ತೇನೆ. ಎಲ್ಲರಿಂದ ಮಾಹಿತಿ ಪಡೆಯುತ್ತೇನೆ. ಮುಂದೆ ಮೈತ್ರಿ ಸರ್ಕಾರ ಬರಲಿದೆ ಎಂಬ ನಿಲುವು ಎಲ್ಲಾ ಪಕ್ಷದವರಲ್ಲಿದೆ. ಆದರೆ ಜೆಡಿಎಸ್ ಪೂರ್ಣ ಪ್ರಮಾಣದ ಸರ್ಕಾರ ರಚಿಸಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಯವರು ಕೆಸರೆರಚಾಟ ತೊಡಗಿದ್ದಾರೆ. ಆದರೆ ಜೆಡಿಎಸ್ ಬಗ್ಗೆ ಎರಡು ಪಕ್ಷದವರು ಚಕಾರ ಎತ್ತುತ್ತಿಲ್ಲ. ಮುಂದೆ ಮೈತ್ರಿ ಸರ್ಕಾರದ ಅನಿವಾರ್ಯ ಪರಿಸ್ಥಿತಿ ಬಂದರೆ ಅನುಕೂಲವಾಗುತ್ತದೆಂದು ಜೆಡಿಎಸ್ ಬಗ್ಗೆ ಯಾರೂ ಟೀಕೆ ಮಾಡುತ್ತಿಲ್ಲ ಎಂದು ಅಭಿಪ್ರಾಯ ಪಟ್ಟರು.

Advertisement

ಮತ್ತೊಂದು ಪವರ್ ಸೆಂಟರ್: ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಕನ್ನಡಿಗರಾದ ನಮಗೆ ಸಂತೋಷದ ಸಂಗತಿ, ಅಸೂಯೆ ಪಡಬಾರದು. ಆದರೆ ಈ ಮೂಲಕ ಮತ್ತೊಂದು ಪವರ್ ಸೆಂಟರ್ ಆಗಲಿದೆ, ಈಗ ಖರ್ಗೆ ಅವರಿಗೆ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರ ಚಲಾಯಿಸಲು ಬಿಟ್ಟು ಅವರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬ ಕುತೂಹಲವಿದೆ ಎಂದರು.

ಜಿ.ಟಿ‌.ದೇವೇಗೌಡರ ಆಹ್ವಾನದ ಮೇರೆಗೆ ಹೆಚ್.ಡಿ‌.ದೇವೇಗೌಡರು ಇಂದು ಮೈಸೂರಿನ ಅವರ ಮನೆಗೆ  ಹೋಗುತ್ತಾರೆ. ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಶಾಸಕರ 126 ಸೀಟ್ ಗೆಲ್ಲಿಸಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಆದರೆ 126 ರಲ್ಲಿ ನಿಖಿಲ್ ಅವರು ಇರಬಹುದು ಎಂದು ಎಚ್ ಡಿಕೆ ಪುತ್ರನ ಚುನಾವಣೆ ಸ್ಪರ್ಧೆ ಬಗ್ಗೆ ಸುಳಿವು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next