Advertisement
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ಯಾಸ್ ಕಂಪನಿಗಳ ಪ್ರತಿನಿಧಿಗಳ ಸಭೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಸಚಿವ ಯು.ಟಿ. ಖಾದರ್, ಡಿಸೆಂಬರ್‌ನಿಂದ ಯೋಜನೆ ಅನುಷ್ಠಾನಕ್ಕೆ ತರಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಹೇಳಿದರು.
ಎರಡು ಸಿಲಿಂಡರ್ ಮತ್ತು ರಿಫಿಲಿಂಗ್ ಉಚಿತವಾಗಿ ನೀಡಲಾಗುವುದು. ಒಂದು ಬಡ ಕುಟುಂಬಕ್ಕೆ ವರ್ಷಕ್ಕೆ 2 ಸಿಲಿಂಡರ್ ಬೇಕಾಗುತ್ತದೆ ಎಂದು ಸಮೀಕ್ಷೆ ಹೇಳಿದೆ. ಅದಕ್ಕಾಗಿ 2 ಸಿಲಿಂಡರ್‌ಗಳನ್ನು ನಿಗದಿಪಡಿಸಲಾಗಿದೆ. ಯೋಜನೆ ಅನುಷ್ಠಾನದ ಬಳಿಕ, ಹೆಚ್ಚು ಸಿಲಿಂಡರ್ ಬೇಕು ಎಂದು ಕಂಡು ಬಂದರೆ, ಆಗ ಪರಿಶೀಲಿಸಲಾಗುವುದು. ಇದಕ್ಕಾಗಿ ಪ್ರತಿ ಕುಟುಂಬಕ್ಕೆ 4,040 ರೂ. ಸರ್ಕಾರ ಭರಿಸಲಿದೆ. ಇದಕ್ಕೆ ಒಟ್ಟು 1,100 ಕೋಟಿ ರೂ. ವೆಚ್ಚ ಆಗಲಿದೆ. 15 ರಿಂದ 20 ಲಕ್ಷ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂಬ ಅಂದಾಜಿದೆ. ಹೆಚ್ಚುವರಿ ಬೇಕಾಗುವ 1 ಲಕ್ಷ ಸಿಲಿಂಡರ್‌ಗಳನ್ನು ಪೂರೈಸಲು ಗ್ಯಾಸ್ ಕಂಪೆನಿಗಳು ಒಪ್ಪಿಕೊಂಡಿವೆ ಎಂದು ಖಾದರ್ ವಿವರಿಸಿದರು.
Related Articles
ಕೇಂದ್ರ ಸರ್ಕಾರದ ಉಜ್ವಲ ಯೋಜನೆಗೆ ಪರ್ಯಾಯವಾಗಿ ಸೀಮೆ ಎಣ್ಣೆ ಬಳಸುವ ಗ್ಯಾಸ್ ಸಂಪರ್ಕ ಇಲ್ಲದ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ನೀಡಲು ರಾಜ್ಯ ಸರ್ಕಾರ ಪ್ರಸಕ್ತ ವರ್ಷದ ಬಜೆಟ್ ನಲ್ಲಿ “ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ ಜಾರಿಗೆ ತರುವುದಾಗಿ ಘೋಷಿಸಿತ್ತು. ಜೂನ್ 1ರಿಂದ ಈ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರಿಂದ ಉಚಿತ ಸ್ಟೌ ಮತ್ತು ಬರ್ನರ್ ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿತ್ತು. ಈ ಮಧ್ಯೆ ಉಜ್ವಲ ಯೋಜನೆಯ ಫಲಾನುಭವಿಗಳ ಗುರಿ ಪೂರ್ಣಗೊಳ್ಳುವವರಿಗೆ ಹೊಸ ಗ್ಯಾಸ್ ಸಂಪರ್ಕ
ನೀಡದಿರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಅದಕ್ಕಾಗಿ ಅನಿಲ ಭಾಗ್ಯ ಯೋಜನೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿತ್ತು. ಇದೀಗ, ಡಿಸೆಂಬರ್‌ನಿಂದ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Advertisement