Advertisement
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್, ಜಿಮ್ ಮುಂತಾದೆಡೆ ಶೇ. 50 ಜನರಿಗೆ ಅನುಮತಿ ಮತ್ತಿತರ ಕ್ರಮಗಳು ಜಾರಿಯಲ್ಲಿರುತ್ತವೆ ಎಂದರು. ಜ. 19ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫೂÂì ಜಾರಿಯಲ್ಲಿರುತ್ತದೆ. ಕರ್ಫ್ಯೂ ಅವಧಿಯಲ್ಲಿ ರೋಗಿಗಳಿಗೆ ಆಸ್ಪತ್ರೆಗೆ ದಾಖಲಿಸುವುದು, ತುರ್ತುಸೇವೆ ಹೊರತುಪಡಿಸಿ ಉಳಿದಂತೆ ಎಲ್ಲ ಬಗೆಯ ಸಾರ್ವಜನಿಕರ ಸಂಚಾರ ನಿಷೇಧಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಇರುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ರಾಜ್ಯ, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣೆಗೆ, ತುರ್ತುಸೇವೆಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಆಹಾರ ಧಾನ್ಯ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು ಮತ್ತು ಇತರೆ ಡೈರಿ ಪದಾರ್ಥಗಳು, ಪಶು ಆಹಾರಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅವಕಾಶವಿದೆ. ತಳ್ಳುಗಾಡಿಯಲ್ಲಿ ತರಕಾರಿ, ಹಣ್ಣುಗಳ ವ್ಯಾಪಾರಕ್ಕೆ ಅನುಮತಿ ಇದೆ. ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್, ಹೋಂ ಡೆಲಿವರಿ ವ್ಯವಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಬಟ್ಟೆ, ಪಾತ್ರೆ, ಬೆಳ್ಳಿ-ಬಂಗಾರ, ಇತರೆ ಅಂಗಡಿ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕ ಉದ್ಯಾನವನಗಳನ್ನು ಬಂದ್ ಮಾಡಲಾಗುತ್ತದೆ. ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದ 5 ದಿನ ಮಾತ್ರ ಕಾರ್ಯ ನಿರ್ವಹಿಸಲಿವೆ. ಶನಿವಾರ ಶಾಲಾ-ಕಾಲೇಜು ಇರುವುದಿಲ್ಲ ಎಂದು ಮಾಹಿತಿ ನೀಡಿದರು.
Related Articles
Advertisement
ಅಸಡ್ಡೆ-ನಿರ್ಲಕ್ಷ್ಯ ಬೇಡ
ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇರಬಹುದು, ಆದರೆ ಇದ್ದಕ್ಕಿದ್ದಂತೆ ಪ್ರಕರಣಗಳ ಸಂಖ್ಯೆ ದ್ವಿಗುಣ, ತ್ರಿಗುಣ ಆಗಬಹುದು. ಕೊರೊನಾ ಸಂಖ್ಯೆ ಕಡಿಮೆ ಇದೆ ಎಂದು ಸಾರ್ವಜನಿಕರು ಯಾವುದೇ ಕಾರಣಕ್ಕೂ ಅಸಡ್ಡೆ, ನಿರ್ಲಕ್ಷé ಮಾಡಬಾರದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾರ್ಗಸೂಚಿ ಹಾಗೂ ನಿಯಮ ಪಾಲಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ನಿಯಮ ಉಲ್ಲಂಘಿಸಿದ್ರೆ ದಂಡ, ಕೇಸ್ ಗ್ಯಾರಂಟಿ
ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುವುದು. ಮಾಸ್ಕ್ ಧರಿಸದೇ ಇರುವುದು, ನಿಯಮಗಳ ಉಲ್ಲಂಘನೆ ಕಂಡುಬಂದರೆ ನಿಯಮಾನುಸಾರ ದಂಡ ವಿಧಿಸಲಾಗುವುದು. ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಪಾಲಿಸಬೇಕು. ಇಲ್ಲದಿದ್ದಲ್ಲಿ ತಕ್ಕ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಎಚ್ಚರಿಸಿದರು.
ಒಮಿಕ್ರಾನ್ ಇಲ್ಲ
ದಾವಣಗೆರೆ ಜಿಲ್ಲೆಯಲ್ಲಿ ಈವರೆಗೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ಹರಿಹರ ಮೂಲದವರೊಬ್ಬರಿಗೆ ಬೆಂಗಳೂರಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು. ಅವರು ಅಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸಾcರ್ಜ್ ಆಗಿದ್ದಾರೆ. ಒಮಿಕ್ರಾನ್ ಪತ್ತೆಗೆ ಹಾಸನಕ್ಕೆ ಗಂಟಲು ದ್ರವ ಮಾದರಿ ಕಳುಹಿಸುವ ವ್ಯವಸ್ಥೆ ಇದೆ. ದಾವಣಗೆರೆಯಲ್ಲಿಯೇ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ಅನುಕೂಲ ಆಗುವಂತೆ ವಿಶೇಷ ಕೇಂದ್ರೀಯ ಪ್ರಯೋಗಾಲಯಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
10ರಿಂದ ಬೂಸ್ಟರ್ ಡೋಸ್
ಸರ್ಕಾರದ ಸೂಚನೆಯಂತೆ ಆರೋಗ್ಯ, ಪೊಲೀಸ್ ಇಲಾಖೆ ಒಳಗೊಂಡಂತೆ ಕೊರೊನಾ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರಿಗೆ ಜ. 10ರಿಂದ ಬೂಸ್ಟರ್ ಡೋಸ್ ನೀಡಲಾಗುವುದು. ಜಿಲ್ಲೆಯಲ್ಲಿ ನಿತ್ಯ 2 ರಿಂದ 3 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾ ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.