Advertisement
ಶನಿವಾರ ಶನಿವಾರ ಸೇಡಂ ತಾಲೂಕಿನ ಖಂಡೆರಾಯನಪಲ್ಲಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ನಾಡೆಪಲ್ಲಿ ಭತ್ತ ಖರೀದಿ ಕೇಂದ್ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸಾರ್ವಜನಿಕರ ಅನಗತ್ಯ ಕಚೇರಿ ಅಲೆದಾಟ ತಪ್ಪಿಸಲು ಇಂದು ಜನರ ಬಾಗಿಲೆಗೆ ಬಸವರಾಜ ಬೊಮ್ಮಾಯಿ ಸರ್ಕಾರ ಬಂದಿದೆ. ಕಂದಾಯ ಇಲಾಖೆಯ ಸೇವೆಗಳನ್ನು ಉಚಿತವಾಗಿ ಒದಗಿಸುವ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೆ ನಿಮ್ಮ ಮನೆಗೆ ಬಂದು ನಿಮ್ಮ ಹಕ್ಕಿನ ಪಹಣಿ ದಾಖಲೆಗಳನ್ನು ನೀಡಿದ್ದಾರೆ ಎಂದರು.
ಕಲಬುರಗಿ ಕಲ್ಯಾಣಕ್ಕೆ ಡಿ.ಸಿ. ದಕ್ಷ ಅಧಿಕಾರಿ;
ಕಲಬುರಗಿಯ ಕಲ್ಯಾಣಕ್ಕೆ ದಕ್ಷ ಅಧಿಕಾರಿ ಡಿ.ಸಿ. ಯಶವಂತ ವಿ. ಗುರುಕರ್ ಅಧಿಕಾರ ವಹಿಸಿದ ಎರಡೇ ದಿನದಲ್ಲಿ 2 ವರ್ಷದಿಂದ ಅನುಕಂಪದ ನೌಕರಿಗೆ ಅಲೆಡಾಡುತ್ತಿದ್ದ ಮಹಿಳೆಗೆ ನೌಕರಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಹಲವಾರು ವರ್ಷಗಳಿಂದ ಧೂಳು ಹಿಡಿದಿದ್ದ ಭೂವಾಜ್ಯ ಕಡತಗಳಿಗೆ ಒಂದೇ ತಿಂಗಳಿನಲ್ಲಿ ಮುಕ್ತಿ ನೀಡಿದ್ದಾರೆ. ಭ್ರಷ್ಠರಿಗೆ ಸಿಂಹ ಸ್ವಪ್ನವಾಗಿರುವ ಇವರು ಕಚೇರಿಯಲ್ಲಿ ಕಡಿಮೆ ಜನರ ಬಳಿಯೆ ಹೆಚ್ಚು ಇರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಸೇವಾ ಮನೋಭಾವವನ್ನು ಕೊಂಡಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಡಾ.ಉಮೇಶ ಜಾಧವ ಅವರು ಮಾತನಾಡಿ, ತಿಂಗಳ ಹಿಂದೆ ಖಾಸಗಿ ಕಾರ್ಯಕ್ರಮದಲ್ಲಜ ಭಾಗಿಯಾಗಲು ಇಲ್ಲಿಗೆ ಬಂದಾಗ ಸ್ಥಳೀಯ ಮುಖಂಡರು ಭತ್ತ ಖರೀದಿ ಕೇಂದ್ರಕ್ಕೆ ಬೇಡಿಕೆ ಇಟ್ಟಿದ್ದರು. ಕೇಂದ್ರ ತೆರೆಯುವ ಕುರಿತು ಅಂದು ನಾನು ಮತ್ತು ಶಾಸಕ ರಾಜಕುಮಾರ ತೇಲ್ಕೂರ ಅವರು ಭರವಸೆ ನೀಡಿದ್ದೇವೆ. ಅದರಂತೆ ಇಂದು ಖರೀದಿ ಕೇಂದ್ರ ಆರಂಭಿಸಲಾಗಿದೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ. ಸರ್ಕಾರದ ಆಶಯದಂತೆ ಇಲ್ಲಿನ ಡಿ.ಸಿ. ಯಶವಂತ ವಿ. ಗುರುಕರ್ ಅವರು ಹಗಲು-ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಾತನಾಡಿ ಭತ್ತ ಖರೀದಿ ಕೇಂದ್ರದಲ್ಲಿ ಇದುವರೆಗೂ 95 ಜನ ನೊಂದಾಯಿಸಿಕೊಂಡಿದ್ದಾರೆ. 3000 ನೋಂದಣಿ ಗುರಿ ಹೊಂದಲಾಗಿದೆ. ಗರಿಷ್ಟ 40 ಕ್ವಿಂಟಾಲ್ ಭತ್ತ ಮಾರಾಟ ಮಾಡಬಹುದು. ನಾನು ರೈತಾಪಿ ಕುಟುಂಬದಿಂದ ಬಂದಿದ್ದು, ನಿಮ್ಮ ಏನೇ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ಬಗೆಹರಿಸುವ ಪ್ರಯತ್ನ ಮಾಡುವೆ ಎಂದರು.
ಕಾರ್ಯಕ್ರಮದಲ್ಲಿ ಪ್ರಭಾರಿ ಸಹಾಯಕ ಆಯುಕ್ತೆ ಸುರೇಖಾ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಗುಣಕಿ, ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ, ಕೃಷಿ ಇಲಾಖೆಯ ಉಪನಿರ್ದೇಶಕ ಸಮದ್ ಪಟೇಲ್, ಸಹಾಯಕ ನಿರ್ದೇಶಕ ಹಂಪಣ್ಣ ಚವ್ಹಾಣ, ಸಹಕಾರ ಇಲಾಖೆಯ ಸಹಾಯಕ ನಿಬಂಧಕ ರವಿಂದ್ರ, ಸೇಡಂ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಮಾರುತಿ ನಾಯಕ್, ಮುಖಂಡರಾದ ಪರ್ವತರೆಡ್ಡಿ ಪಾಟೀಲ, ನಾಗರೆಡ್ಡಿ ದೇಶಮುಖ, ಸಿದ್ದಯ್ಯ ಸ್ವಾಮಿ ನಾಡೆಪಲ್ಲಿ, ನಾಗೇಂದ್ರಪ್ಪ ಸಾಹುಕಾರ, ಓಂಪ್ರಕಾಶ ಪಾಟೀಲ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಾರ್ವಜನಿಕರು ಇದ್ದರು.