Advertisement

ಬಜೆಟ್‌ನ ಕಾರ್ಯಕ್ರಮಗಳನ್ನು ಅನುಷ್ಠಾನಿಸಿ: ಸಚಿವ ಸುನಿಲ್‌  

12:17 AM Aug 19, 2021 | Team Udayavani |

ಬೆಂಗಳೂರು: ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್‌ ಸಂಪರ್ಕ ನೀಡುವುದನ್ನೂ ಒಳಗೊಂಡಂತೆ ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಇಂಧನ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್‌ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂಧನ ಇಲಾಖೆ, ವಿದ್ಯುತ್‌ ಸರಬರಾಜು ಕಂಪೆನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ  ಪರಿಶೀಲನ ಸಭೆ ನಡೆಸಿ ಮಾತನಾಡಿದ ಅವರು, ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರಕಾರದ ಸಹಯೋಗದ ಯೋಜನೆಗಳನ್ನು  ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೆ ರಾಜಿ ಯಾಗುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ, ಬದಲಾವಣೆ ಕುರಿತಂತೆ ಬಹಳಷ್ಟು ದೂರುಗಳು ಬರುತ್ತವೆ. ಅವುಗಳ ಬಗ್ಗೆ ತತ್‌ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಗಂಗಾಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ನೀಡುವ ಕೆಲಸವೂ ಸಹ ಕಾಲಮಿತಿಯೊಳಗೆ ಮತ್ತು ಪರಿಣಾಮಕಾರಿ ಆಗಬೇಕು. ಅನಧಿಕೃತ ಸಂಪರ್ಕ, ವಿದ್ಯುತ್‌ ಸೋರಿಕೆ, ವಿದ್ಯುತ್‌ ಸಂಪರ್ಕ ನೀಡುವಲ್ಲಿ ವಿಳಂಬ, ಮೀಟರ್‌ಗಳ ಅಳವಡಿಕೆಯಲ್ಲಿ ಆಗುವ ವಿಳಂಬ ಇತ್ಯಾದಿ ಕಾರಣಗಳಿಂದ ಇಂಧನ ಸರಬರಾಜು ಕಂಪೆನಿಗಳಿಗಾಗುವ ನಷ್ಟ ತಡೆಯಲು ಕಾರ್ಯಯೋಜನೆ ರೂಪಿಸಬೇಕು. ಅದನ್ನು ಅನುಷ್ಠಾನಗೊಳಿಸಲು ಎಲ್ಲ ವಿಧವಾದ ಕ್ರಮಗಳನ್ನು ಕೈಗೊಳ್ಳಬೇಕು. ಕೃಷಿ ಮತ್ತು ಕೈಗಾರಿಕೆಗಳಿಗೆ ಮತ್ತು ಎಲ್ಲ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ ಹಾಗೂ ಸಮರ್ಪಕ ವಿದ್ಯುತ್‌ ಸರಬರಾಜು ನಮ್ಮ ಆದ್ಯತೆಯಾಗಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಚಾರ್ಜಿಂಗ್‌ ಕೇಂದ್ರಕ್ಕೆ ಆದ್ಯತೆ :

Advertisement

ವಿದ್ಯುತ್‌ ಚಾಲಿತ ವಾಹನಗಳು ಹೆಚ್ಚಾಗಿ ಬರುತ್ತಿರುವುದರಿಂದ ವಿದ್ಯುತ್‌ ವಾಹನ ಚಾರ್ಜಿಂಗ್‌ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. ಈಗಾಗಲೇ ಗುರುತಿಸಿರುವ ಸ್ಥಳಗಳಲ್ಲಿ ವಿದ್ಯುತ್‌ ರೀಚಾರ್ಜಿಂಗ್‌ ಮಾಡುವ ಕಾರ್ಯಕ್ಕೆ ವೇಗ ನೀಡಬೇಕು. ಗ್ರಾಹಕ ಸಂಬಂಧಿ ಸಮಸ್ಯೆಗಳ ಪರಿಹಾರ, ಹೊಸ ವಿದ್ಯುತ್‌ ಸಂಪರ್ಕ ನೀಡಿಕೆ ಸಹಿತ ವಿವಿಧ ಸೇವೆಗಳನ್ನು ಒಂದೇ ಕಡೆ 24 ಗಂಟೆಯೊಳಗೆ ಒದಗಿಸುವ ಫಾಸ್‌ಟ್ರ್ಯಾಕ್‌ ಸೆಲ್‌ ಅನ್ನು ಕೂಡಲೇ ಆರಂಭಿಸಬೇಕು ಎಂದರು.

ಪ್ರಶಸ್ತಿ ಪ್ರದಾನ :

ಕೆಜಿಎಫ್‌ ಉಪವಿಭಾಗಕ್ಕೆ ಜುಲೈ ತಿಂಗಳ ಅತ್ಯುತ್ತಮ ಕಾರ್ಯ  ನಿರ್ವಹಣೆಗೆ ಅಲ್ಲಿನ ಸಹಾಯಕ ಎಂಜಿನಿಯರ್‌ ಹೇಮಲತಾ ಅವರಿಗೆ ಪ್ರಶಸ್ತಿ ಫಲಕ ಮತ್ತು 10 ಸಾವಿರ ನಗದು ಬಹುಮಾನ ನೀಡಲಾಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next