ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಕೊರತೆಯಿಂದಾಗಿ ಕೆಲವೆಡೆ ಸರ್ಕಾರಿ ಶಾಲೆ ಮುಚ್ಚುವ ಮಾತುಗಳು ಕೇಳಿ ಬರುತ್ತಿದ್ದು, ಶಾಲೆ ಮುಚ್ಚಿದರೆ ಹೆಣ್ಣು ಮಕ್ಕಳ ಶಿಕ್ಷಣ ಕುಂಠಿತವಾಗುತ್ತದೆ ಎಂದು ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಂಶೋಧಕಿ ಡಾ.ವೈ.ಸಿ.ಭಾನುಮತಿ ಹೇಳಿದರು.
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ನಗರದ ಮಹಾರಾಣಿ ಕಲಾ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ಈ ಶತಮಾನದಲ್ಲಿ ಮಹಿಳೆ ಶೈಕ್ಷಣಿಕ, ಸಾಹಿತ್ಯಿಕ, ಆರ್ಥಿಕವಾಗಿ ಸಾಕಷ್ಟು ಮುಂದುವರಿ ದಿದ್ದರೂ ಒಬ್ಬಂಟಿಯಾಗಿ ನಿರ್ಭೀತಿಯಿಂದ ಬದುಕಲು ಸಾಧ್ಯವಾಗದಿರುವುದು ವಿಷಾ ದನೀಯ.ಅಲ್ಲಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ,ಅನ್ಯಾಯದ ಪ್ರಕರಣ ಮರುಕಳಿಸುತ್ತಿರುವುದು ಕಳವಳಕಾರಿ ಎಂದರು.
ಹೆಣ್ಣು ಮಕ್ಕಳು ಮನೆಯ ಒಳ-ಹೊರಗೆ, ಕೆಲಸ ಮಾಡುವ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆ್ಯಸಿಡ್ ದಾಳಿಗಳಿಗೆ ಗುರಿಯಾಗುತ್ತಿ ರುವುದನ್ನು ಕಂಡಾಗ ಸಂಕಟವಾಗುತ್ತದೆ. ಇದಕ್ಕೆ ಪರಿಹಾರ ಇಲ್ಲವೇ ಎಂದು ಪ್ರಶ್ನಿಸಿದ ಅವರು, ಹೆಣ್ಣನ್ನು ಕುರಿತಂತೆ ಪುರುಷ ಪ್ರಧಾನ ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ. ಹೆಣ್ಣು ಮಕ್ಕಳನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಶಿಕ್ಷಣದ ಅಗತ್ಯವಿದೆ ಎಂದರು.
ಕನ್ನಡದಲ್ಲಿ ಪ್ರತಿ ವರ್ಷ ಅಂದಾಜು 8 ಸಾವಿರ ಪುಸ್ತಕಗಳು ಪ್ರಕಟವಾಗುತ್ತಿವೆ. ಲೇಖಕಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಪ್ರಕಟಿಸುತ್ತಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿರುವ ಉದ ಯೋನ್ಮುಖ ಬರಹಗಾರ್ತಿಯರ ಕೃತಿ ಪ್ರಕಟಣೆಗೆ ಸರ್ಕಾರ, ಸಂಘ-ಸಂಸ್ಥೆಗಳು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಮೇಯರ್ ಪುಷ್ಪಲತಾ ಸಮ್ಮೇಳನ ಉದ್ಘಾಟಿಸಿದರು. ಪ್ರಾಂಶುಪಾಲ ಪ್ರೊ.ಸಿ.ಎಚ್.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ವಿವಿ ಕುಲಪತಿ ಪ್ರೊ.ಪದ್ಮಾ ಶೇಖರ್ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಜಿಪಂ ಅಧ್ಯಕ್ಷ ಸಾ.ರಾ.ನಂದೀಶ್ ಇತರರಿದ್ದರು.