ಲೋಕಸಭೆ ಚುನಾವಣೆ, ಗ್ಯಾರಂಟಿ ಯೋಜನೆಗಳ ಜಾರಿ ಹಾಗೂ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಹಿರಿಯ ಸಚಿವರ ಸಹಿತ 50ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಕೂಡ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
Advertisement
ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ನಾಲ್ಕು ರಾಜ್ಯಗಳ ಸಭೆ ನಡೆಸಿದೆ. ಈಗ ಕರ್ನಾಟಕದ ವಿದ್ಯಮಾನಗಳತ್ತ ಚಿತ್ತಹರಿಸಿದೆ. ಎಐಸಿಸಿ ವತಿಯಿಂದ 28 ಲೋಕಸಭಾ ಕ್ಷೇತ್ರಗಳ ವರದಿ ತರಿಸಿಕೊಳ್ಳಲಾಗಿದ್ದು, 2018, 2023ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯ ಮತ ಗಳಿಕೆಯ ಏರಿಳಿತ, ಸಂಭಾವ್ಯ ಟಿಕೆಟ್ ಆಕಾಂಕ್ಷಿಗಳು, ಜಾತಿ ಲೆಕ್ಕಾಚಾರದ ಬಗ್ಗೆ ಮಾಹಿತಿ ಸಂಗ್ರಹಿಸಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ| ಜಿ. ಪರಮೇಶ್ವರ, ಸಚಿವರಾದ ಎಂ.ಬಿ. ಪಾಟೀಲ…, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಬಿ.ಕೆ. ಹರಿಪ್ರಸಾದ್, ಆರ್.ವಿ. ದೇಶಪಾಂಡೆ, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಎಚ್.ಕೆ. ಪಾಟೀಲ…, ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಖಾನ್, ಎನ್. ಚೆಲುವರಾಯಸ್ವಾಮಿ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಎನ್.ಎಸ್. ಬೋಸರಾಜು, ಪ್ರಿಯಾಂಕ್ ಖರ್ಗೆ, ರಾಘವೇಂದ್ರ ಹಿಟ್ನಾಳ್, ಇ. ತುಕಾರಾಮ…, ಚಂದ್ರಪ್ಪ, ಜಗದೀಶ ಶೆಟ್ಟರ್ , ಲಕ್ಷ್ಮಣ ಸವದಿ, ವಿನಯ್ ಕುಲಕರ್ಣಿ, ರಮೇಶ್ ಕುಮಾರ್, ಬಿ.ಎಲ್. ಶಂಕರ್, ಡಿ.ಕೆ. ಸುರೇಶ್, ಜಿ.ಸಿ. ಚಂದ್ರಶೇಖರ್, ಡಾ| ಎಲ್. ಹನುಮಂತಯ್ಯ ಮತ್ತಿತರ ಪ್ರಮುಖ ನಾಯ ಕರು ಭಾಗಿಯಾಗಲಿದ್ದಾರೆ. ಮೂರು ಸಭೆ
ರಾಜ್ಯ ನಾಯಕರ ಜತೆಗೆ ಒಟ್ಟು ಮೂರು ಹಂತಗಳಲ್ಲಿ ಸಭೆ ನಡೆಯಲಿದೆ. ಅಪರಾಹ್ನ 3.30ಕ್ಕೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುಜೇìವಾಲಾ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಆಯ್ದ ನಾಯಕರು ಚರ್ಚೆ ನಡೆಸುತ್ತಾರೆ. ಆ ಬಳಿಕ 4.30ಕ್ಕೆ ನಡೆಯುವ ಸಭೆಯಲ್ಲಿ ಎಲ್ಲ ಸಚಿವರು ಭಾಗಿಯಾಗಲಿದ್ದಾರೆ. 7.30ಕ್ಕೆ ಮೂರನೇ ಸಭೆ ನಡೆಯಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಕರ್ನಾಟಕದ ವಿದ್ಯಮಾನವೇ ಮಹತ್ವ ಪಡೆದುಕೊಳ್ಳಲಿದೆ.
Related Articles
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
Advertisement