Advertisement

Gowri-Ganesha Festival ಆಚರಿಸಲು ಉಭಯ ಜಿಲ್ಲಾಡಳಿತದಿಂದ ಮಹತ್ವದ ಸೂಚನೆ

11:56 PM Aug 21, 2024 | Team Udayavani |

ಮಂಗಳೂರು/ಉಡುಪಿ: ಗೌರಿ, ಗಣೇಶ ಚತುರ್ಥಿ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿಯಾಗಿ ಆಚರಿಸಬೇಕು ಎಂದು ಉಭಯ ಜಿಲ್ಲೆಗಳ ಜಿಲ್ಲಾಡಳಿತವು ಸೂಚಿಸಿದೆ.

Advertisement

ವಿಗ್ರಹ ವಿಸರ್ಜನೆ ಕಾರಣದಿಂದ ಉಂಟಾಗುವ ಮಾಲಿನ್ಯ ದಿಂದ ನೈಸರ್ಗಿಕ ಜಲ ಮೂಲ ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಮತ್ತು ರಾಸಾ ಯನಿಕ ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ,ಬಾವಿ ಮುಂತಾದ ಜಲ ಮೂಲ ಗಳಲ್ಲಿ ವಿಸರ್ಜಿಸಿರುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂ ಸುವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅನುಸಾರ ಕ್ರಮ ಕೈಗೊಳ್ಳಲಾಗುವುದು.

ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಗುರುತಿಸಿರುವ ಸ್ಥಳಗಳಲ್ಲೇ ವಿಸರ್ಜಿಸಬೇಕು. ಸಾರ್ವಜನಿಕವಾಗಿ ಪ್ರತಿಷ್ಠಾಪಿಸ ಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಯೊಂದು ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್‌ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿ ಪಡೆದ ಬಳಿಕವೇ ಸ್ಥಾಪಿಸಬೇಕು ಹಾಗೂ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next