Advertisement

“ಗೆದ್ದು ಬಂದರೆ ಕಾಳುಮೆಣಸು ಆಮದು ಪ್ರಕರಣ ಬಯಲು’

01:05 AM Apr 09, 2019 | sudhir |

ಮಡಿಕೇರಿ: ಸಂಸದ ಪ್ರತಾಪ ಸಿಂಹ ಅವರು ಕೇಂದ್ರದ ಸಂಬಾರ ಮಂಡಳಿ ಸದಸ್ಯರಾಗಿದ್ದರೂ ಬೆಳೆಗಾರರ ಮತ್ತು ರೈತರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್‌. ವಿಜಯಶಂಕರ್‌ ಟೀಕಿಸಿದ್ದಾರೆ.

Advertisement

ಮಡಿಕೇರಿಯಲ್ಲಿ ಆರಂಭಿಸಿರುವ ಮೈತ್ರಿ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಲೋಕಸಭಾ ಚುನಾವಣೆಯಲ್ಲಿ ತಾನು ಗೆದ್ದರೆ ಪಕ್ಷ ಭೇದವಿಲ್ಲದೆ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಒಗ್ಗಟ್ಟಿನಿಂದ ಶ್ರಮ ವಹಿಸಿ ಮತದಾರರ ಮನವೊಲಿಸಿದಲ್ಲಿ ನನ್ನ ಗೆಲುವು ಖಚಿತ ಹಾಗೂ ಆ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಕರೆ ನೀಡಿದರು.

ಕಾಫಿ, ಕರಿಮೆಣಸು, ಏಲಕ್ಕಿ, ಕಿತ್ತಳೆ, ಅಡಿಕೆ, ತೆಂಗು, ಭತ್ತದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ, ಬೆಳೆಗಾರರು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಅಲ್ಲದೆ, ನೈಸರ್ಗಿಕ ವಿಕೋಪಗಳಿಗೆ ಸಿಲುಕಿ ಆರ್ಥಿಕವಾಗಿ ಚೇತರಿಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಹೀಗಿದ್ದೂ, ಇಲ್ಲಿನ ಸಂಸದರು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾದಿಯಲ್ಲಿ ಕಾರ್ಯನಿರ್ವಹಿಸಿಲ್ಲ. ಕೇಂದ್ರದ ಆಮದು ನೀತಿಗಳಿಂದ ಉಂಟಾಗಿರುವ ಕಾಫಿ, ಕರಿಮೆಣಸಿನ ದಾರಣೆಯ ಕುಸಿತ ತಡೆಗಟ್ಟುವಲ್ಲಿ ವಿಫ‌ಲರಾಗಿರುವುದಾಗಿ ಆರೋಪಿಸಿದರು. ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್‌ ,ಜಿಲ್ಲಾ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್‌ ಕುಮಾರ್‌ ಎಂಎಲ್‌ಸಿ ವೀಣಾ ಅಚ್ಚಯ್ಯ, ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಮಡಿಕೇರಿ ನಗರಾಧ್ಯಕ್ಷ ಅಬ್ದುಲ್‌ ರಜಾಕ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್‌, ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುರಯ್ಯ ಅಬ್ರಾರ್‌, ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next