Advertisement
ಗಮನ ಸೆಳೆಯುವ ಸೂಚನೆ ವೇಳೆ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಅಶೋಕ ಕುಮಾರ್ ರೈ, ಬಿಪಿಎಲ್ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಸಾಧ್ಯವಾಗದೆ ಇರುವುದರಿಂದ ಸರಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ತೊಂದರೆಯಾಗುತ್ತಿದೆ ಎಂದು ಹೇಳಿದರು.
ಈಗಾಗಲೇ 10 ಕೆ.ಜಿ. ಅಕ್ಕಿಯ ಪೈಕಿ 5 ಕೆ.ಜಿ. ಅಕ್ಕಿಯನ್ನು ನೀಡುತ್ತಿದ್ದು, ಉಳಿದ 5 ಕೆ.ಜಿ. ಅಕ್ಕಿಯ ಬದಲು ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಭವಿಷ್ಯದಲ್ಲಿ ನಗದು ಬದಲು ಅಕ್ಕಿ ಕೊಡುವುದಾದರೆ ಕುಚಲಕ್ಕಿ ಕೊಡಿ ಎಂದು ಅಶೋಕ ಕುಮಾರ್ ರೈ ಆಗ್ರಹಿಸಿದರು.ಇದಕ್ಕೆ ಉತ್ತರಿಸಿದ ಆಹಾರ ಸಚಿವರು, ಸಾಧ್ಯವಾದಷ್ಟು ಕುಚಲಕ್ಕಿ ಕೊಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.