Advertisement

ಇಂದಿರಾ ಆದರ್ಶ ಮೈಗೂಡಿಸಿಕೊಳ್ಳಿ: ಪ್ರಮೋದ್‌

03:11 PM Nov 28, 2017 | |

ಕೋಟ: ಇಂದಿರಾ ಗಾಂಧಿ ಈ ದೇಶಕ್ಕಾಗಿ ತನ್ನ ಸರ್ವಸ್ವವನ್ನು ತ್ಯಾಗ ಮಾಡಿದವರು. ಬಡವರು, ದೀನ-ದಲಿತರ ಕುರಿತು ಆಕೆಗಿದ್ದ ಕಾಳಜಿ ಅಪಾರ. ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರು ಇಂದಿರಾ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ರವಿವಾರ ಕೋಟ ಬ್ಲಾಕ್‌ ಕಾಂಗ್ರೆಸ್‌ ಆಶ್ರಯದಲ್ಲಿ ಸಾಲಿಗ್ರಾಮದಲ್ಲಿರುವ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಜರಗಿದ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಡವರ ಪಾಲಿನ ಮಹಾ ತಾಯಿ ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮ ಬಡವರ ಪಾಲಿಗೆ ಆಶಾಕಿರಣವಾಗಿದೆ. ಬ್ಯಾಂಕ್‌ ರಾಷ್ಟ್ರೀಕರಣ, ಉಳುವವನೆ ಭೂಮಿಯ ಒಡೆಯ, ರಾಜಧನ ರದ್ದತಿ ಮೊದಲಾದ ಕಾರ್ಯಕ್ರಮಗಳ ಮೂಲಕ ಅವರು ಬಡವರ ಪಾಲಿಗೆ ಮಹಾತಾಯಿಯಾದರು ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದರು.

ದೇಶದ ಇತಿಹಾಸ ಬದಲಾಯಿಸಿದಾಕೆ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ಭಾರತವನ್ನು ತನ್ನ ಚಾಣಕ್ಯ ಆಡಳಿತ ನೀತಿಯ ಮೂಲಕ ಅಭಿವೃದ್ಧಿಶೀಲವಾಗಿಸುವಲ್ಲಿ ಇಂದಿರಾ ಗಾಂಧಿ ಅವರ ಪಾತ್ರ ಮಹತ್ವದ್ದು. ಆದ್ದರಿಂದ ದೇಶದ ಪ್ರತಿಯೊಬ್ಬ ಪ್ರಜೆ ಅವರ ಸ್ಮರಣೆ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್‌ನ ಇಂಟೆಕ್‌ ಅಧ್ಯಕ್ಷ ರಾಕೇಶ ಮಲ್ಲಿ ಹೇಳಿದರು.

ಕೋಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌ ಕುಂದರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪರಿಶಿಷ್ಟ ಪಂಗಡದ ಜನರಿಗೆ ಸೀರೆ ಹಾಗೂ ಪಂಚೆ ವಿತರಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜನಾರ್ದನ ತೋನ್ಸೆ, ರಾಜ್ಯ ಅಲ್ಪಸಂಖ್ಯಾಕ ನಿಗಮದ ಅಧ್ಯಕ್ಷ ಎಂ.ಎ. ಗಫ‌ೂರ್‌, ಪಕ್ಷದ ವೀಕ್ಷಕ ಎಂ.ಎಸ್‌. ಅಹಮ್ಮದ್‌, ಎಸ್‌ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಪಕ್ಷದ ಮುಖಂಡ ಪದ್ಮಪ್ರಸಾದ್‌ ಜೈನ್‌, ಇಬ್ರಾಹಿಂ ಸಾಹೇಬ್‌, ಮಾಣಿಗೋಪಾಲ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ್‌ ಹೆಗ್ಡೆ, ಕುಂದಾಪುರ ಯುವ ಕಾಂಗ್ರೆಸ್‌ ಅಧ್ಯಕ್ಷ ಇಚ್ಛಿತಾರ್ಥ ಶೆಟ್ಟಿ, ಐಟಿ ಸೆಲ್‌ನ ಚಂದ್ರಶೇಖರ ಶೆಟ್ಟಿ, ಮಹಿಳಾ ಕಾಂಗ್ರೆಸ್‌ ಮುಖ್ಯಸ್ಥೆ ರೋಶನಿ ಒಲಿವೇರಾ, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಮಮತಾ ಶೆಟ್ಟಿ ಉಪಸ್ಥಿತರಿದ್ದರು.

ಕೋಟ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಕಾರ್ಕಡ ಅಚ್ಯುತ ಪೂಜಾರಿ ಸ್ವಾಗತಿಸಿ, ವಕೀಲ ಮಹಮ್ಮದ್‌ ಸುಹಾನ್‌ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next